ಉಪ್ಪಿನಂಗಡಿ: ಪ್ರವಾದಿ ಮಹಮ್ಮದ್ ಪೈಗಂಬರರ ದಿನಾಚರಣೆಯ ಮೂಲಕ ವಿದ್ಯಾರ್ಥಿಗಳಿಗೆ ದೊರಕುವ ಸಾಂಸ್ಕೃತಿಕ ವೇದಿಕೆಗಳಿಂದ ಪೈಗಂಬರರ ಸೌಹಾರ್ದತೆ, ಐಕ್ಯತೆಯ ಬದುಕು, ತತ್ವ ಅದರ್ಶಗಳು, ಕೀರ್ತನೆಗಳು ವಿದ್ಯಾರ್ಥಿಗಳಲ್ಲಿ ಸಂಸ್ಕಾರಯುತ ಕಲಿಕೆಗೆ ಸ್ಪೂರ್ತಿ ತುಂಬುತ್ತದೆ ಎಂದು ಸುನ್ನಿ ಯುವಜನ ಸಂಘದ ಅಧ್ಯಕ್ಷ ಎಸ್.ಬಿ. ಮುಹಮ್ಮದ್ ದಾರಿಮಿ ಹೇಳಿದರು.
ಕೊಲದ ಹಿದಾಯತುಲ್ ಇಸ್ಲಾಂ ಮದ್ರಸದ ವತಿಯಿಂದ ಹಮ್ಮಿಕೊಳ್ಳಲಾದ ಈದ್-ಮಿಲಾದ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮದ್ರಸ ವಿದ್ಯಾರ್ಥಿಗಳಿಗೆ ಈ ರೀತಿಯ ವೇದಿಕೆ ನಿರ್ಮಿಸುವ ಮೂಲಕ ಅವರಲ್ಲಿ ಇರುವ ಪ್ರತಿಭೆ ಅನಾವರಣಕ್ಕೂ ಅವಕಾಶ ನೀಡಿದಂತಾಗುತ್ತದೆ ಎಂದರು.ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಸೆಯ್ಯದ್ ಜುನೈದ್ ಜಿಫ್ರಿ ತಂಙಳ್ ಅಧ್ಯಕ್ಷತೆ ವಹಿಸಿ ದುವಾಃ ನೆರವೇರಿಸಿದರು.
ಸಮಾರಂಭದಲ್ಲಿ ಗಂಡಿಬಾಗಿಲು ಮಸೀದಿ ಖತೀಬ್ ಅಬ್ದುಲ್ ಹಮೀದ್ ಶೌಕತ್ ಫೈಝಿ ಮಾತನಾಡಿದರು. ಸಮಾರಂಭದಲ್ಲಿ ಸದರ್ ಮುಅಲ್ಲಿಂ ಅಬ್ದುಲ್ ರಹಿಮಾನ್ ಫೈಝಿ, ಮುಅದ್ದಿಂ ಬದ್ರುದ್ದೀನ್ ಮುಸ್ಲಿಯಾರ್, ಪೆರಿಯಡ್ಕ ಜುಮಾ ಮಸೀದಿ ಖತೀಬ್ ಅಬ್ದುಲ್ ರಹಿಮಾನ್ ಫೈಝಿ, ಸದರ್ ಮುಅಲ್ಲಿಂ ಅಶ್ರಫ್ ಮುಸ್ಲಿಯಾರ್, ಝಕರಿಯಾ ಮುಸ್ಲಿಯಾರ್, ನೀರಾಜೆ ಮದ್ರಸದ ಅಧ್ಯಕ್ಷ ಎಸ್.ಕೆ. ಸಿದ್ದಿಕ್, ಗ್ರಾಮ ಪಂಚಾಯತ್ ಸದಸ್ಯ ನಝೀರ್ ಪೂರಿಂಗ, ಕೆಮ್ಮಾರ ಮದ್ರಸದ ಅಧ್ಯಕ್ಷ ಕಮಾಲ್, ಮಾಜಿ ಅಧ್ಯಕ್ಷ ಎನ್.ಎ. ಇಸಾಕ್, ಮದ್ರಸ ಮೆನೇಜ್‌ಮೆಂಟ್ ಕಾರ್ಯದರ್ಶಿ ಜಿ. ಮಹಮ್ಮದ್ ರಫೀಕ್, ಬಡಿಲ ಹುಸೇನ್, ಅಬ್ದುಲ್ ರಹಿಮಾನ್ ಯುನಿಕ್, ಅಬ್ದುಲ್ ಖಾದರ್ ಆತೂರು, ಇಸ್ಮಾಯಿಲ್ ಕೆಮ್ಮಾರ ಮತ್ತಿತರರು ಉಪಸ್ಥಿತರಿದ್ದರು.
ಮದ್ರಸದ ಸದರ್ ಮುಅಲ್ಲಿಂ ಅಬ್ದುಲ್ಲ ಮುಸ್ಲಿಯಾರ್ ಸ್ವಾಗತಿಸಿ, ವಂದಿಸಿದರು.