ಬಡಗನ್ನೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿಯ ವಿಜಯದಶಮಿಯ ದಿನ ಬೆಳಗ್ಗೆ ಶಿವಾನಂದ ಶಾಂತಿಯವರ ಪೌರೋಹಿತ್ಯದಲ್ಲಿ ಶಾರದಾ ಪೂಜೆ, ಮಕ್ಕಳಿಗೆ ಅಕ್ಷರಾಭ್ಯಾಸ, ಅವಳಿ ಮಕ್ಕಳಿಂದ ವಿಶೇಷ ಸೇವೆ, ಮಹಾಪೂಜೆ, ಪುಟಾಣಿಗಳಿಗೆ ಅನ್ನಪ್ರಾಶನ ಹಾಗೂ ಮಹಾ ಅನ್ನಸಂತರ್ಪಣೆ ಜರಗಿತು.
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಂಗಳೂರು ಜಿಲ್ಲೆ ಸೇರಿ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಮಹಾಮಾತೆ ಹಾಗೂ ಕ್ಷೇತ್ರದ ಶಕ್ತಿಗಳ ಆಶೀರ್ವಾದ ಪಡೆದುಕೊಂಡರು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ್ ನಡುಬೈಲ್, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಮುಂತಾದವರು ಉಪಸ್ಥಿತರಿದ್ದು, ರಾತ್ರಿಯ ವಿಶೇಷ ಪೂಜೆಯೊಂದಿಗೆ ವಿಜಯದಶಮಿ ಹಬ್ಬದ ಉತ್ಸವ ಸಂಪನ್ನಗೊಂಡಿತು.
ಭಜನಾ ಕಾರ್ಯಕ್ರಮ:
ನವರಾತ್ರಿ ಈ ಹತ್ತು ದಿವಸದಲ್ಲಿ ಸುಮಾರು 20 ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಸಂಕೀರ್ತಣೆ, ನಡೆಯಿತು. ಅನ್ನಸಂತರ್ಪಣೆ ನವರಾತ್ರಿ ಶುಭ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ಆಗಮಿಸಿ ಅನ್ನ ಪ್ರಸಾದ ಸ್ವೀಕರಿಸಿದರು.