ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

0

ಅ.18 ಅರ್ಜಿ ಸಲ್ಲಿಕೆಗೆ ಅಂತಿಮ ದಿನ

ಪುತ್ತೂರು: 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಅಹ್ವಾನಿಸಲಾಗಿದೆ.


ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಕೃಷಿ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ(ಹಸಿರು ಮನೆ, ಅಬಿsವೃದ್ಧಿ, ಸಸ್ಯಕಾಶಿ, ಕೃಷಿ ಯಾಂತ್ರೀಕರಣ ಇತ್ಯಾದಿ), ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ಯಾವುದಾದರೂ ಒಂದು ಚಟುವಟಿಕೆಗೆ ಮಾತ್ರ ಒಂದು ಅರ್ಜಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿ, ಫೋಟೋಗ್ರಾಫ್, ಖರ್ಚುವೆಚ್ಚಗಳು, ವರಮಾನ, ಪತ್ರಿಕಾ ಪ್ರಕಟಣೆಗಳ ಮಾಹಿತಿ ಇತ್ಯಾದಿಗಳ ಪ್ರತಿ ಲಗತ್ತಿಸಬೇಕು. ಅಳವಡಿಸಿರುವ ತಾಂತ್ರಿಕತೆ ಪ್ರಸ್ತುತ ಸನ್ನಿವೇಶಕ್ಕೆ ಮತ್ತು ರೈತ ಸಮುದಾಯಕ್ಕೆ ಪ್ರೇರಣೆಗೆ ಮತ್ತು ಅಳವಡಿಕೆಗೆ ಸಹಕಾರಿಯಾಗುವಂತಿರಬೇಕು. ಕಳೆದೆರಡು ಸಾಲಿನಲ್ಲಿ ತಾಲೂಕು ಅಥವಾ ಜಿಲ್ಲಾಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದವರು ಮುಂದಿನ ಹಂತದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ ಒಂದು ಬಾರಿ ರಾಜ್ಯಮಟ್ಟದ ಶ್ರೇಷ್ಠ ಕೃಷಿಕ/ಕೃಷಿ ಪಂಡಿತ ಪ್ರಶಸ್ತಿ ಪಡೆದಿದ್ದಲ್ಲಿ ಪುನಹ ಯಾವುದೇ ತರನಾದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಆಸ್ತಕರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಅ.18ರ ಮೊದಲು ಕಳುಹಿಸಿಕೊಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here