ಬಂಟ್ವಾಳ: ಖಾಸಗಿ‌ ಶಾಲೆಯ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿ

0

ಚಾಲಕ ಸಹಿತ ವಿದ್ಯಾರ್ಥಿಗಳು ಅಪಾಯದಿಂದ ಪಾರು

ವಿಟ್ಲ:ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ‌ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಅ.14ರಂದು ಬೆಳಿಗ್ಗೆ ನಡೆದಿದೆ.


ಬಡಕಬೈಲು ಖಾಸಗಿ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಚೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ‌ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ‌ಡಿಕ್ಕಿ‌ಹೊಡೆದು ನಿಂತಿದೆ. ಘಟನೆಯಿಂದಾಗಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here