ಅ.19ರ ತನಕ ಭಾರೀ ಮಳೆ ಸಾಧ್ಯತೆ

0

ಮಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ದ.ಕ.ಜಿಲ್ಲಾಧಿಕಾರಿ ಸೂಚಿಸಿದ್ದು, ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದ್ದಾರೆ.


ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹಾಗೂ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವಂತೆಯೂ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.


ಅ.16ರಿಂದ ಅ.19ರವರೆಗೆ ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ದಕ್ಷಿಣ ಕನ್ನಡ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಅ.19ರವರೆಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅ.19ರವರೆಗೆ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ, ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here