ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆ.ಎಂ.ಎಫ್.ಗೆ ಭೇಟಿ

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಾಣಿಜ್ಯ ವಿಭಾಗದ ಸಂಯುಕ್ತಾಶ್ರಯದಲ್ಲಿ ಮಂಗಳೂರಿನ ಕೆ.ಎಂ.ಎಫ್ ಸಂಸ್ಥೆಗೆ ಬುಧವಾರ ಭೇಟಿ ನೀಡಿದರು.

ಕೆ.ಎಂ.ಎಫ್ ಉದ್ಯೋಗಿ ಭಾವನಾ ಅವರು ಹಾಲು ಸಂಗ್ರಹಣೆ, ಪ್ಯಾಕೇಜಿಂಗ್, ವಿತರಣೆಯ ಬಗೆಗೆ ಮಾಹಿತಿ ನೀಡಿದರಲ್ಲದೆ ಕೆ.ಎಂ.ಎಫ್ ವತಿಯಿಂದ ತಯಾರಿಸಲಾಗುವ ಹಾಲಿನ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ ಬಗೆಗೆ ತಿಳಿಸಿಕೊಟ್ಟರು. ಕೆ.ಎಂ.ಎಫ್ ಉದ್ಯೋಗಿ ಆದರ್ಶ ಅವರು ಸಹಕರಿಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ, ವಾಣಿಜ್ಯ ವಿಭಾಗ ಮುಖ್ಯಸ್ಥೆ ಅನನ್ಯಾ ವಿ, ಉಪನ್ಯಾಸಕಿ ಶ್ರೀಕೀರ್ತನಾ, ಕನ್ನಡ ವಿಭಾಗ ಮುಖ್ಯಸ್ಥೆ ಜಯಂತಿ ಪಿ, ಪತ್ರಿಕೋದ್ಯಮ ಉಪನ್ಯಾಸಕ ಹರ್ಷಿತ್ ಪಿಂಡಿವನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here