ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ

0

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅ.20ರಂದು ಬೆಳಿಗ್ಗೆ ಸಮಯ 9.30ರಿಂದ ಸಾಯಂಕಾಲ 4.00ರವರೆಗೆ VAO ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ಸಿದ್ದತಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದು, ಈ ತರಬೇತಿಯ ಸದುಪಯೋಗವನ್ನು ಪಡೆಯಲು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ವಿದ್ಯಾಮಾತಾ ಅಕಾಡೆಮಿಯ ಈ ತರಬೇತಿ ಕಾರ್ಯಗಾರಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಕೂಡಲೇ ಈ ಕೆಳಗಡೆ ನೀಡಲಾಗಿರುವ ವಿಳಾಸ/ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳತಕ್ಕದ್ದು.ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆ ಹಾಗೂ ಎರಡನೇ ಹಂತದ ಕಡ್ಡಾಯ ಕನ್ನಡ ಪರೀಕ್ಷೆಗೆ ತರಬೇತಿ ಪ್ರಾರಂಬಿಸಿದ ವಿದ್ಯಾಮಾತಾ ಅಕಾಡೆಮಿಎರಡನೇ ಹಂತದಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 26.10.2024ರಂದು ಕಡ್ಡಾಯ ಕನ್ನಡ ಹಾಗೂ 27.10.2024 ನೇಮಕಾತಿ ಪರೀಕ್ಷೆ ನಡೆಯಲಿದೆ ಈಗಾಗಲೇ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ 27.10.2024ರಂದು ನೇಮಕಾತಿ ಪರೀಕ್ಷೆ ನಡೆಯಲಿದೆ.

ಈಗಾಗಲೇ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷಾ ತರಬೇತಿ ಹಾಗೂ ಎರಡನೇ ಹಂತದಲ್ಲಿ ಅರ್ಜಿ ಸಲ್ಲಿಸಿ ಪರೀಕ್ಷೆಗಳನ್ನು ಎದುರಿಸಲಿರುವ ಅಭ್ಯರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿಯು ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ ನೇಮಕಾತಿ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ರಾತ್ರಿ ಸಮಯ 7 ರಿಂದ 8 ಹಾಗೂ 8ರಿಂದ 9 ರವರೆಗೆ ತರಗತಿಗಳು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 9448527606 / 96204 68869

LEAVE A REPLY

Please enter your comment!
Please enter your name here