ಪುತ್ತೂರು: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆ ದರ್ಬೆ, ರೋಟರಿ ಪುತ್ತೂರು ಎಲೈಟ್, ರೋಟರಿ ಪುತ್ತೂರು ಸ್ವರ್ಣ, ಎಜೆ ಹಾಸ್ಪಿಟಲ್ ಮಂಗಳೂರು ಹಾಗೂ ಸಂತ ಫಿಲೋಮಿನಾ ಪ್ರೌಢಶಾಲಾ ಅಮೃತ ಮಹೋತ್ಸವ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಆರೋಗ್ಯ ಶಿಬಿರ ಹಾಗೂ ಜಾಗೃತಿ ಮಾಹಿತಿ ಕಾರ್ಯಾಗಾರ ಅ.18ರಂದು ಬೆಳಿಗ್ಗೆ 9.30ರಿಂದ ನಡೆಯಲಿದೆ.
ಶಿಬಿರದಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಯ ವೈದ್ಯರ ತಂಡ ಆರೋಗ್ಯ ಶಿಬಿರವನ್ನು ನಡೆಸಿಕೊಡಲಿದ್ದಾರೆ. ಡಾ.ನಾಗಶ್ರೀ ವಾಸುದೇವರವರು ಮಾದಕ ವ್ಯಸನ ಮತ್ತು ಯುವಜನತೆ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ರೋಟರಿ ಪುತ್ತೂರು ಎಲೈಟ್ ತಂಡದಿಂದ ಮೊಬೈಲ್ ಅಪಾಯಗಳ ಕುರಿತಾದ ಬೀದಿ ನಾಟಕ ಹಾಗೂ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಕ್ಕಳ ಹೆತ್ತವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಕಟಣೆ ತಿಳಿಸಿದೆ.