ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನ
ಅ.28ರಂದು ಚುನಾವಣೆ
ಪುತ್ತೂರು:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ಶಾಖೆಯ ಕಾರ್ಯಕಾರಿ ಸಮಿತಿಯ 33 ಸ್ಥಾನಗಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಅ.28ರಂದು ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಅ.18ರಂದು ಅಂತಿಮ ದಿನವಾಗಿದೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಅ.9ರಿಂದ ಪ್ರಾರಂಭಗೊಂಡಿದೆ.ವಿವಿಧ ಇಲಾಖೆಗಳ ಒಟ್ಟು 13 ಮಂದಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.ಅ.18 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ.ಅ.19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.ಅ.21 ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.ಅದೇ ದಿನ ಸಂಜೆ ಅಂತಿಮವಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಲಿದೆ.ಅ.28ರಂದು ಚುನಾವಣೆಯು ಸಂಘದ ಕಚೇರಿಯಲ್ಲಿ ನಡೆಯಲಿದೆ.ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ಪ್ರಕ್ರಿಯೆ ನಡೆದು ಸಂಜೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.ಸಂಘದಲ್ಲಿ 5 ವರ್ಷಗಳಲ್ಲಿ ಸತತವಾಗಿ ಸದಸ್ಯತ್ವ ನೋಂದಾಯಿಸಿಕೊಂಡು, ಶುಲ್ಕ ಪಾವತಿಸಿದ ಸರಕಾರಿ ನೌಕರರು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುವ ಹಾಗೂ ಮತದಾನದ ಹಕ್ಕನ್ನು ಪಡೆದಿರುತ್ತಾರೆ.
33 ನಿರ್ದೇಶಕ ಸ್ಥಾನಗಳು:
ಪುತ್ತೂರಿನ ಒಟ್ಟು 24 ಇಲಾಖೆಗಳಿಂದ ಕಾರ್ಯಕಾರಿ ಸಮಿತಿಗೆ ಒಟ್ಟು 33 ನಿರ್ದೇಶಕರ ಆಯ್ಕೆ ನಡೆಯಲಿದೆ.ಕೃಷಿ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ, ಸರಕಾರಿ ಪ್ರೌಢಶಾಲೆಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ಕಚೇರಿ, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು, ಸಮಾಜ ಕಲ್ಯಾಣ ಇಲಾಖೆ, ತೋಟಗಾರಿಕಾ ಇಲಾಖೆ, ಖಜಾನೆ ಇಲಾಖೆ, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ, ನ್ಯಾಯಾಂಗ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರಿಗೆ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ, ಅಬಕಾರಿ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಕಾರ್ಮಿಕ ಇಲಾಖೆಗಳಿಂದ ತಲಾ 1 ಸ್ಥಾನ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕ ಪರಿಶೋಧನ ಹಾಗೂ ಸಾಂಖ್ಯಿಕ ಇಲಾಖೆಗಳಿಂದ ತಲಾ 2 ಸ್ಥಾನ, ಸರಕಾರಿ ಪ್ರಾಥಮಿಕ ಶಾಲೆಗಳಿಗೆ 3 ಸ್ಥಾನ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಿಗೆ 4 ನಿರ್ದೇಶಕ ಸ್ಥಾನಗಳನ್ನು ಮೀಸಲಿಡಲಾಗಿದೆ.
1098 ಮತದಾರರು:
ಪುತ್ತೂರು ತಾಲೂಕಿನ 24 ವಿವಿಧ ಇಲಾಖೆಗಳಲ್ಲಿ ಒಟ್ಟು 1098 ಮಂದಿ ಮತದಾರರಿದ್ದಾರೆ.ಕೃಷಿ ಇಲಾಖೆ-7, ಪಶುಪಾಲನಾ ಮತ್ತು ಪಶುವೈದ್ಯ ಇಲಾಖೆ-11, ಕಂದಾಯ ಇಲಾಖೆ-47, ಲೋಕೋಪಯೋಗಿ ಇಲಾಖೆ-6, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ-5, ಸರಕಾರಿ ಪ್ರಾಥಮಿಕ ಶಾಲೆಗಳು-352, ಸರಕಾರಿ ಪ್ರೌಢಶಾಲೆಗಳು-132, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ಕಚೇರಿ-15, ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು-99, ಸಮಾಜ ಕಲ್ಯಾಣ ಇಲಾಖೆ-16, ಅರಣ್ಯ ಇಲಾಖೆ-57, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ-146, ತೋಟಗಾರಿಕಾ ಇಲಾಖೆ-5, ಖಜಾನೆ ಇಲಾಖೆ-2, ಭೂಮಾಪನಾ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ-18, ನ್ಯಾಯಾಂಗ ಇಲಾಖೆ-78, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ-44, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-13, ಸಾರಿಗೆ ಇಲಾಖೆ-7, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ-5, ಅಬಕಾರಿ ಇಲಾಖೆ-14, ಸಹಕಾರ ಮತ್ತು ಸಹಕಾರ ಸಂಘಗಳ ಲೆಕ್ಕಪರಿಶೋಧನ ಹಾಗೂ ಸಾಂಖ್ಯಿಕ ಇಲಾಖೆ-5, ವಾಣಿಜ್ಯ ತೆರಿಗೆ ಇಲಾಖೆ-11, ಕಾರ್ಮಿಕ ಇಲಾಖೆ-3 ಮಂದಿ ಮತದಾರರಿದ್ದಾರೆ.
ಚುನಾವಣಾಧಿಕಾರಿಯಾಗಿ ನಿವೃತ್ತ ಉಪತಹಶೀಲ್ದಾರ್ ಸೂರಪ್ಪ ಗೌಡ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ನಿವೃತ್ತ ಶಿಕ್ಷಕ ಪ್ಯಾಟ್ರಿಕ್ ಲೋಬೋ ಕರ್ತವ್ಯ ನಿರ್ವಹಿಸಲಿದ್ದಾರೆ.
ಕಡಬ ತಾಲೂಕು ಶಾಖೆ ಕಾರ್ಯಕಾರಿ ಸಮಿತಿಗೂ ಚುನಾವಣೆ:
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಡಬ ತಾಲೂಕು ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕ ಸ್ಥಾನಗಳಿಗೂ ಅ.28ರಂದು ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ಅ.18 ಕೊನೆಯ ದಿನವಾಗಿದೆ.ಕಡಬ ತಾಲೂಕು ಅನುಷ್ಠಾನದ ಮೊದಲು ಕಡಬ ಮತ್ತು ಪುತ್ತೂರು ತಾಲೂಕಿಗೆ ಸಂಬಂಧಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ಶಾಖೆಯೊಂದೇ ಕಾರ್ಯನಿರ್ವಹಿಸುತ್ತಿತ್ತು.ಇದೀಗ ಕಡಬ ತಾಲೂಕು ಶಾಖೆಗೆ ಪ್ರತ್ಯೇಕವಾಗಿ ಚುನಾವಣೆ ನಡೆಯಲಿದೆ.
ಕಡಬ ತಾಲೂಕು ಶಾಖೆ ಕಾರ್ಯಕಾರಿ ಸಮಿತಿಗೂ ಚುನಾವಣೆ
ಅ.28ರಂದು ಚುನಾವಣೆಯು ಸಂಘದ ಕಚೇರಿಯಲ್ಲಿ ನಡೆಯಲಿದೆ.ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯ ತನಕ ಮತದಾನ ಪ್ರಕ್ರಿಯೆ ನಡೆದು ಸಂಜೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.ಸಂಘದಲ್ಲಿ 5 ವರ್ಷಗಳಲ್ಲಿ ಸತತವಾಗಿ ಸದಸ್ಯತ್ವ ನೋಂದಾಯಿಸಿಕೊಂಡು, ಶುಲ್ಕ ಪಾವತಿಸಿದ ಸರಕಾರಿ ನೌಕರರು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುವ ಹಾಗೂ ಮತದಾನದ ಹಕ್ಕನ್ನು ಪಡೆದಿರುತ್ತಾರೆ.