ಉಪ್ಪಿನಂಗಡಿ: ವಿಧಾನ ಪರಿಷತ್ ಉಪಚುನಾವಣೆ- ಬಿಜೆಪಿಯಿಂದ ಪೂರ್ವಭಾವಿ ಸಭೆ

0

ಉಪ್ಪಿನಂಗಡಿ: ದಕ್ಷಿಣ ಕನ್ನಡ- ಉಡುಪಿ ಜಿಲ್ಲಾ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಪೂರ್ವಭಾವಿ ಸಭೆ ಇಲ್ಲಿನ ಶ್ರೀ ಶಾರದಾ ಕಲಾ ಮಂದಿರದಲ್ಲಿ ನಡೆಯಿತು.


ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭಂಡಾರಿ ಬೊಟ್ಯಾಡಿಯವರು ಗೆಲುವು ಸಾಧಿಸಲು ಎಲ್ಲರೂ ಶ್ರಮ ವಹಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಉಜ್ರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಚುನಾವಣಾ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ, ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ಅನಿಲ್ ತೆಂಕಿಲ, ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಸುನೀಲ್ ದಡ್ಡು, ವಿದ್ಯಾಧರ ಜೈನ್, ಪ್ರಶಿಕ್ಷಣ ಪ್ರಕೋಷ್ಠ ಜಿಲ್ಲಾ ಸಂಚಾಲಕ ಚಂದ್ರಶೇಖರ ಬಪ್ಪಳಿಗೆ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮುಕುಂದ ಬಜತ್ತೂರು, ಮಂಡಲ ಮಾಜಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಕಾರ್ಯದರ್ಶಿ ಪುನೀತ್ ಮಾರ್ತಾರ್, ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಬಾಳೆಕಲ್ಲು, ಕಾರ್ಯದರ್ಶಿ ಕಿರಣ್ ರೈ, ಹಿಂದೂ ಪರ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮುಖಂಡರಾದ ಉಮೇಶ್ ಶೆಣೈ, ಜಯಂತ ಪೊರೋಳಿ, ಚಂದಪ್ಪ ಮೂಲ್ಯ, ಉಪ್ಪಿನಂಗಡಿ, ಹಿರೇಬಂಡಾಡಿ ನೆಕ್ಕಿಲಾಡಿ ಪೆರ್ನೆ ಬಿಳಿಯೂರು, ಕೆದಿಲ ಗ್ರಾಮಗಳ ಶಕ್ತಿ ಕೇಂದ್ರದ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಬೂತ್ ಅಧ್ಯಕ್ಷರುಗಳು ಮತ್ತು ಎಲ್ಲಾ ಪಂಚಾಯತ್‌ಗಳ ಸದಸ್ಯರು ಉಪಸ್ಥಿತರಿದ್ದರು.


ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಅತ್ರೆಮಜಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮೋಹನ್ ಪಕಳ ವಂದಿಸಿದರು.

LEAVE A REPLY

Please enter your comment!
Please enter your name here