ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನಾ ದಿನವಾದ ವಿಜಯದಶಮಿಯ ಅಂಗವಾಗಿ ಅ.20ರಂದು ಬೆಳಿಗ್ಗೆ ಪುತ್ತೂರು ಪೇಟೆಯಲ್ಲಿ ಪಥ ಸಂಚಲನ ನಡೆಯಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಪುತ್ತೂರು ಪಂಚವಟಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ ಸಮಾವೇಶಗೊಂಡು ಅಲ್ಲಿಂದ ಮುಖ್ಯರಸ್ತೆಯಾಗಿ ಬಸ್ ನಿಲ್ದಾಣದ ಮೂಲಕ ಪಂಚವಟಿಕೆಗೆ ತೆರಳಲಾಯಿತು. ಈ ಸಂದರ್ಭದಲ್ಲಿ ಮಕ್ಕಳು, ಯುವಕರು, ಹಿರಿಯರು ಸೇರಿ ಸಂಘದ ಗಣವೇಷದಾರಿಗಳಾಗಿ ಪಥ ಸಂಚಲನದಲ್ಲಿ ಶಿಸ್ತು ಬದ್ಧವಾಗಿ ಪಾಲ್ಗೊಂಡು ಹೆಜ್ಜೆ ಹಾಕಿದರು.