ಅನುದಾನ ರಹಿತ ಶಾಲೆಗಳ ಸಂಘ(ರುಪ್ಸಾ)ದಿಂದ ಉತ್ತಮ ಆಡಳಿತಗಾರ, ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ

0

ಪುತ್ತೂರು:ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ, ಕರ್ನಾಟಕ(Recognised Unaided Private Schools’ Association of Karnataka) ರುಪ್ಸಾ ಇವರು ಕೊಡಮಾಡುವ 2024-25ನೇ ಸಾಲಿನ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು ಪುತ್ತೂರು ಮತ್ತು ಕಡಬ ತಾಲೂಕಿನಿಂದಲೂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಉತ್ತಮ ಆಡಳಿತ ಮಂಡಳಿ ಪ್ರಶಸ್ತಿ:
ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ,ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ,ಬಂಟ್ವಾಳ ತಾಲೂಕಿನ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿದ್ದ ದಿ.ಎಲ್.ಎನ್.ಕುಡೂರುರವರು ಉತ್ತಮ ಆಡಳಿತಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಂಗಳೂರು ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್‌ನ ಅಧ್ಯಕ್ಷ ಡಾ|ಕೆ.ಸಿ.ನಾಕ್,ಮಂಗಳೂರು ಕಣಚ್ಚೂರ್ ಪಬ್ಲಿಕ್ ಸ್ಕೂಲ್‌ನ ಚೇರ್‌ಮ್ಯಾನ್ ಯು.ಕೆ.ಮೋನು ಅವರೂ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಉತ್ತಮ ಶಿಕ್ಷಕ ಪ್ರಶಸ್ತಿ:
ಪುತ್ತೂರಿನ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಆಶಾ ಬೆಳ್ಳಾರೆ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾ ಜನಾರ್ದನ ಆಲಂಕಾರು, ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿ ವಿದ್ಯಾರತ್ನ ಎಚ್.ಹಾಗೂ ಬಂಟ್ವಾಳ ತಾಲೂಕು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸುಪ್ರಿಯಾ ಡಿ.ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ನಾಳೆ ಪ್ರಶಸ್ತಿ ಪ್ರದಾನ:
ಅ.21ರಂದು ಬೆಂಗಳೂರಿನ ಜುಬ್ಲಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪರವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here