ಪುತ್ತೂರು : ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದವರು ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಡೆದ ವಿದ್ಯಾಭಾರತಿ ಕರ್ನಾಟಕ 24ನೇ ಪ್ರಾಂತೀಯ ಗಣಿತ – ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಎಂಟನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ಬಾಲ ವರ್ಗದ ಗಣಿತ ವಸ್ತು ಪ್ರದರ್ಶನದಲ್ಲಿ ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾಳೆ. ಈಕೆ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಮತ್ತು ಸುಮಿತ್ರ ದಂಪತಿಗಳ ಸುಪುತ್ರಿಯಾಗಿದ್ದಾಳೆ.
ಮುಕ್ರಂಪಾಡಿ ಪ್ರವೀಣ್ ದೊಡ್ಡ ಮಾಣಿ ಮತ್ತು ಚಿತ್ಕಲ ಗೌರಿ ಕೆ ಇವರ ಪುತ್ರಿ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಯತಿ ಭಟ್ ಕಿಶೋರ ವರ್ಗದ ಪ್ರಾಂತೀಯ ವಿಜ್ಞಾನ ಪ್ರಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ.