ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಭೂಮಿ ಪೂಜಾ ಕಾರ್ಯಕ್ರಮ ಅ.23 ರಂದು ಪುತ್ತೂರು ವಿಹಿಂಪ ನಿವೇಶನದಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ನರಸಿಂಹ ಸಂಪುಟದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ನವರತ್ನ ಮತ್ತು ಅಕ್ಷತೆಯನ್ನು ಸಮರ್ಪಿಸಿ ಕೆಸರು ಕಲ್ಲು ಹಾಕುವ ಮೂಲಕ ನೂತನ ಕಾರ್ಯಾಲಯ ಕಾಮಗಾರಿಗೆ ಚಾಲನೆ ನೀಡಿದರು.
ವಿಹಿಂಪ ದಕ್ಷಿಣ ಪ್ರಾಂತದ ಕಾರ್ಯಾಧ್ಯಕ್ಷ ಎಂ.ಬಿ ಪುರಾಣಿಕ್, ವಿಹಿಂಪ ಕೇಂದ್ರಿಯ ಕಾರ್ಯದರ್ಶಿ ಗೋಪಾಲ್ ಜಿ ಮತ್ತು ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು ಪೂವಪ್ಪ ಅವರು ಶ್ರೀಗಳ ಜೊತೆ ಕೆಸರುಕಲ್ಲು ಹಾಕುವಲ್ಲಿ ಜೊತೆ ಸೇರಿದರು. ಕಲ್ಲಾರ ಶ್ರೀ ಗುರು ರಾಘವೇಂದ್ರ ಮಠದ ಅರ್ಚಕ ವೇ ಮೂ ರಾಘವೇಂದ್ರ ಉಡುಪ ಭೂಮಿ ಪೂಜೆ ನೆರವೇರಿಸಿದರು.
ವಿಹಿಂಪ ಕರ್ನಾಟಕ ಪ್ರಾಂತದ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರೀ , ರಾಷ್ಟ್ರೀಯ ಸ್ವಯಂಸೇವಕ ಸಂಘಚಾಲಕ್ ವಿನಯಚಂದ್ರ, ವಿ.ಹಿಂ.ಪ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕೊಳತ್ತಾಯ ಸಹಿತ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.
ವಿಶಾಖ್ ರೈ ವೈದಿಕ ಮಂತ್ರ, ಸುಕೀರ್ತಿ, ಜಯಲಕ್ಷ್ಮಿ ಬಳಗ ಪ್ರಾರ್ಥಿಸಿದರು. ವಿ.ಹಿಂ.ಪ ನ ಶ್ರೀಧರ್ ತೆಂಕಿಲ, ಗ್ರಾಮಾಂತರ ಸಂಚಾಲಕ ರವಿ ಕೈತ್ತಡ್ಕ, ವಿಶಾಖ್ ರೈ, ಭರತ್ ಕುಮುಡೇಲು, ಜನಾರ್ದನ ಬೆಟ್ಟ ಅತಿಥಿಗಳನ್ನು ಗೌರವಿಸಿದರು. ವಿಹಿಂಪ ಜಿಲ್ಲಾಧ್ಯಕ್ಷರು ಮತ್ತು ಕಟ್ಟಡ ಸಮಿತಿ ಕಾರ್ಯದರ್ಶಿ ಡಾ.ಕೃಷ್ಣಪ್ರಸನ್ನ ಅವರು ಸ್ವಾಗತಿಸಿದರು. ನವೀನ್ ನೆರಿಯ ವಂದಿಸಿದರು. ವಿಹಿಂಪ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಸುಳ್ಯಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.