ಕ್ರೀಡಾಕೂಟ:ಬೆಟ್ಟಂಪಾಡಿ ಸರಕಾರಿ ಪ.ಪೂ ಕಾಲೇಜಿನ(ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

0

putturu: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಸರಕಾರಿ ಪ್ರೌಢ ಶಾಲೆ ಪಾಪೆಮಜಲು ಇದರ ಆಶ್ರಯದಲ್ಲಿ ಅ.22ರಂದು ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿಯ ವಿದ್ಯಾರ್ಥಿ ಅವಿನಾಶ್ 17 ರ ವಯೋಮಾನದ ಬಾಲಕರ ವಿಭಾಗದಲ್ಲಿ 800 ಮೀಟರ್ ಓಟದಲ್ಲಿ ಪ್ರಥಮ 1500 ಮೀಟರ್ ಮತ್ತು 3000 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಹಿತಾಶ್ರೀ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ಕೆ ವಿ ತರಬೇತಿ ನೀಡಿರುತ್ತಾರೆ ಎಂದು ಮುಖ್ಯ ಗುರು ವಿಜಯಕುಮಾರ್ ಎಂ ತಿಳಿಸಿದರು.

LEAVE A REPLY

Please enter your comment!
Please enter your name here