ಪುತ್ತೂರು: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರತಿಭಾ ಪ್ರೌಢಶಾಲೆ ಪಟ್ಟೆ ಇಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
14ರ ವಯೋಮಾನದ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿ ಬಾಲಕರಲ್ಲಿ ವಿಖ್ಯಾತ್ ರವರು 100 ಮೀಟರ್ ಓಟದ ಸ್ಪರ್ಧೆಯಲ್ಲಿ ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಪ್ರಶಾಂತ್ ರವರು 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಉದ್ದ ಜಿಗಿತ ಸ್ಪರ್ಧೆಯಲ್ಲಿ ಪುನೀತ್ ದ್ವಿತೀಯ ಸ್ಥಾನವನ್ನು ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಗಗನ್ ರವರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ. ಹಾಗೆಯೇ ಎಂಟನೇ ತರಗತಿ ವಿಭಾಗದ ಬಾಲಕಿಯರ ವಿಭಾಗದ ತಂಡದಲ್ಲಿ ಸಹಲಾರವರು 100 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ,ಉದ್ದ ಜಿಗಿತ ಸ್ಪರ್ಧೆಯಲ್ಲಿ ತೃತಿಯ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ಬಾಲಕಿಯರ ತಂಡ 4*100 ರಿಲೇ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಕುಮಾರಿ ಪೂರ್ವಿತಾರವರು 800 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು, 1500 ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ. ಕುಮಾರಿ ಪ್ರಣ್ಯರವರು 200 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು, ಕುಮಾರಿ ಜಾನ್ಹವಿರವರು ಚಕ್ರ ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು, 4*100 ರಿಲೀಸ್ ಸ್ಪರ್ಧೆಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಮಹಮ್ಮದ್ ರಾಫಿ ಚಕ್ರ ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು, ನಂದೀಶ್ ಎತ್ತರ ಜಿಗಿತ ಸ್ಪರ್ದಿಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
ಹೀಗೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಸವಣೂರು ಇಲ್ಲಿಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ನಿರ್ವಹಣೆಯೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.