ಪುತ್ತೂರಿನಲ್ಲಿ ಸರಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮಂಜೂತಿಗಾಗಿ ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ಮುಖ್ಯಮಂತ್ರಿಗಳಿಗೆ ಮನವಿ

0

ಪುತ್ತೂರು: ಪುತ್ತೂರಿನಲ್ಲಿ ಸರಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಗೆ ಮಂಜೂರಾತಿ ಮಾಡುವಂತೆ ಶ್ರೀ ಅಖಿಲ ಹವ್ಯಕ ಮಹಾಸಭಾ ಬೆಂಗಳೂರು ಇದರ ಪುತ್ತೂರು ಶಾಖೆಯಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.


ದ.ಕ.ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ, ದಂತ ವೈದ್ಯಕೀಯ, ನರ್ಸಿಂಗ್, ಇಂಜಿನಿಯರಿಂಗ್ ಶಿಕ್ಷಣ ಲಭ್ಯವಿದೆ. ಆದರೆ ಈ ಭಾಗದಲ್ಲಿ ಯಾವುದೇ ಸರಕಾರಿ ಆಯುರ್ವೇದ ಕಾಲೇಜು ಇರುವುದಿಲ್ಲ. ಭಾರತದ ಸಂಪ್ರದಾಯಿಕ ವೈದ್ಯಕೀಯ ಪದ್ಧತಿಯಾದ ಆಯುರ್ವೇದ ದ.ಕ.ಜಿಲ್ಲೆಯಲ್ಲಿ ಜನಪ್ರತಿಯವಾಗಿದ್ದು, ಕಡಿಮೆ ವೆಚ್ಚದ ಚಿಕಿತ್ಸೆಗಾಗಿ ಜಿಲ್ಲೆಯ ಜನಸಾಮಾನ್ಯರು ನೆರೆಯ ರಾಜ್ಯವಾದ ಕೇರಳವನ್ನು ಅವಲಂಬಿಸಿದ್ದಾರೆ. ಈ ಜಿಲ್ಲೆಯಲ್ಲಿ ಆಯುರ್ವೇದ ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳ ಸಂಖ್ಯೆಯು ಹೆಚ್ಚಾಗಿದೆ. ಸರಕಾರಿ ಕಾಲೇಜಿನ ಅಲಭ್ಯತೆಯಿಂದ ರಾಜ್ಯ ಮತ್ತು ದೇಶದ ವಿವಿಧೆಡೆ ಕಲಿಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಕಾಲೇಜು ಸ್ಥಾಪನೆ ಅಗತ್ಯವಿದೆ. ಇದಕ್ಕೆ ಅನುಮತಿ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭಾದ ಪುತ್ತೂರು ಘಟಕದ ಪದಾಧಿಕಾರಿ ಶಿವಶಂಕರ್ ಬೋನಂತಾಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here