ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಸಹೋದರಿ ಕಲ್ಲಾರೆ ನಿವಾಸಿ ನಳಿನಿ ಪುಷ್ಪರಾಜ ಶೆಟ್ಟಿಯವರ ಪುತ್ರ ಪುತ್ತೂರು ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ ಹಾಗೂ ಬಾರ್ಕೂರು ನಿವಾಸಿ ಉದ್ಯಮಿ ಬಾಲಕೃಷ್ಣ ಶೆಟ್ಟಿ ಹಾಗೂ ರೇವತಿ ಶೆಟ್ಟಿ ದಂಪತಿಗಳ ಪುತ್ರಿ ಪ್ರಿಯಾಂಕ ರವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮವು ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ರೈ, ಮಾಜಿ ಸಚಿವ ಬಿ ರಮನಾಥ ರೈ, ಉದ್ಯಮಿ ಪ್ರಕಾಶ್ ಶೆಟ್ಟಿ ಬಂಜಾರ, ಉದ್ಯಮಿ ಗುಣರಂಜನ್ ಶೆಟ್ಟಿ ಬೆಂಗಳೂರು, ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.