ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನ ವಾರ್ಷಿಕ ಕ್ರೀಡಾಕೂಟವು ಅ.23ರಂದು ನಡೆಯಿತು. ವಿದ್ಯಾರ್ಥಿಗಳ ಪಥಸಂಚಲನದ ಮೂಲಕ ಪ್ರಾರಂಭಗೊಂಡ ಕಾರ್ಯಕ್ರಮವನ್ನು ವಿವೇಕಾನಂದ ಪದವಿ ಕಾಲೇಜಿನ ಸಂಚಾಲಕ ಮುರಳೀಕೃಷ್ಣ ಕ್ರೀಡಾಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.”ನನ್ನ ವಿದ್ಯಾರ್ಥಿ ಜೀವನದಲ್ಲಿ ನಾನೂ ಕೂಡ ಇದೇ ಕ್ರೀಡಾಂಗಣದ ಕ್ರೀಡೆಗಳಲ್ಲಿ ಭಾಗವಹಿಸಿದ್ದೆ. ಈ ದಿನ ನೀವೂ ಕೂಡ ಸಂತೋಷದಿಂದ ಭಾಗವಹಿಸುತ್ತಾ ಹಿಂದಿನಿಂದಲೂ ನಡೆದುಕೊಂಡು ಬಂದ ಈ ಪರಂಪರೆಯನ್ನು ಮುಂದುವರಿಸಿ” ಎಂದು ಶುಭಹಾರೈಸಿದರು.
ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ನ ಆಡಳಿತಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕ ಮಹಾದೇವ ಶಾಸ್ತ್ರಿ, ಸದಸ್ಯರಾದ ರವಿ ಮುಂಗ್ಲಿಮನೆ ಹಾಗೂ ಕಾಲೇಜಿನ ವಿದ್ಯಾರ್ಥಿ ನಾಯಕ ಅಂಶಿಕ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಮುರಳೀಧರ್ ಎಸ್ ಪ್ರಾಸ್ತಾವಿಕ ಭಾಷಣದೊಂದಿಗೆ ಅಥಿತಿಗಳನ್ನು ಸ್ವಾಗತಿಸಿದರು ಹಾಗೂ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು, ಕಾಲೇಜಿನ ಶಿಕ್ಷಕ ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸೃಜನ್ಯ ತಂಡದವರು ಪ್ರಾರ್ಥಿಸಿದರು, ಉಪ ಕ್ರೀಡಾ ಕಾರ್ಯದರ್ಶಿ ಶ್ರೀಕಾಂತ್ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿ ನಾಯಕಿ ಶ್ರಾವ್ಯ ವಂದಿಸಿದರು.
ವಾರ್ಷಿಕ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಡುವಲ್ಲಿ ವಿವೇಕಾನಂದ ಮಹಾವಿದ್ಯಾಲಯದ ದೈಹಿಕ ಶಿಕ್ಷಕ ರವಿಶಂಕರ್ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಕ ನವೀನ್ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕ್ರೀಡಾ ಸಹಾಯ ನಿರ್ದೇಶಕ ಅನಿಲ್ ಸಹಕರಿಸಿದರು.