ಬಡಗನ್ನೂರು: ಲಯನ್ಸ್ ಕ್ಲಬ್ ಪುತ್ತೂರು ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಆಶ್ರಯದಲ್ಲಿ ಕುರ್ಚಿ ಹಸ್ತಾಂತರ ಕಾರ್ಯಕ್ರಮ ಅ.25 ರಂದು ಕುಟ್ಟಿನೋಪಿನಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವು ಪುತ್ತೂರು ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಪ್ರೇಮಲತಾ ರಾವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಪುತ್ತೂರು ಲಯನ್ಸ್ ಕ್ಲಬ್ ವತಿಯಿಂದ 10 ಕುರ್ಚಿಗಳನ್ನು ಕೊಡುಗೆ ನೀಡಿದ್ದು ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಪ್ರೇಮಲತಾ ರಾವ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಭವಾನಿ ಹಾಗೂ ಮುಖ್ಯ ಶಿಕ್ಷಕಿ ಫಿಲೋಮಿನಾ ಪಾವ್ಲ್ ರವರಿಗೆ ಹಸ್ತಾಂತರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಖ್ಯಾತ ವಕೀಲರಾದ ಹರೀಣಾಕ್ಷಿ ಜೆ ಶೆಟ್ಟಿ ಮಾತನಾಡಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದರು. ಶಿಕ್ಷಣ ಸಂಪನ್ಮೂಲ ಕೆಂದ್ರಗಳ ಒಕ್ಕೂಟದ ಕಾರ್ಯದರ್ಶಿ ನಯನ ರೈ ಸ್ವಚ್ಚತೆ ಮತ್ತು ಸುರಕ್ಷತೆ ಬಗ್ಗೆ ಅರಿವು ಮೂಡಿಸಿದರು.
ವೇದಿಕೆಯಲ್ಲಿ ಲಯನ್ಸ್ ಜಿಲ್ಲಾಧ್ಯಕ್ಷರಾದ ವತ್ಸಲಾ ರಾಜಿ, ಜಯಶ್ರೀ ಶೆಟ್ಟಿ, ಕಾರ್ಯದರ್ಶಿ ಅರವಿಂದ ಭಗವಾನ್, ಕೋಶಾಧಿಕಾರಿ ಸುಧಾಕರ್, ಕುಂಬ್ರ ಸಿ.ಆರ್.ಪಿ ಶಶಿಕಲಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಭವಾನಿ,ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮಕ್ಕಳ ಪೋಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ ಫಿಲೋಮಿನ ಪಾವ್ಲ್ ಸ್ವಾಗತಿಸಿ ವಂದಿಸಿದರು.