ಮಾನಸಿಕ ವಿಕಲಚೇತನ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ

0

ಪುತ್ತೂರು: ದಕ್ಷಿಣ ಕನ್ನಡ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ವತಿಯಿಂದ ಪ್ರಜ್ಞಾ ಕೇಂದ್ರದ ಮಾನಸಿಕ ವಿಕಲಚೇತನ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ಅ.25ರಂದು ಪ್ರಜ್ಞಾ ಪುನರ್ ವಸತಿ ಕೇಂದ್ರದಲ್ಲಿ ನಡೆಯಿತು.

ಆರೋಗ್ಯ ತಪಾಸಣೆಯನ್ನು ಸರಕಾರಿ ಆಸ್ಪತ್ರೆಯ ಡಾ.ಸ್ಮಿತಾ ರಾಣಿ ಅವರು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಕಾರ್ಯದರ್ಶಿ ನಯನ ರೈ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಪ್ರಜ್ಞಾ ಸಂಸ್ಥೆಯ ಮೇಲ್ವಿಚಾರಕರಾದ ಅಣ್ಣಪ್ಪರವರು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಪುನರ್ವಸತಿ ಕಾರ್ಯಕರ್ತರಾದ ಮುತ್ತಪ್ಪ, ಭರತ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here