ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಅಸ್ತಿತ್ವಕ್ಕೆ

0

ನೆಲ್ಯಾಡಿ: ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಜಮೀನಿಗೆ ಸಂಬಂಧಿಸಿದ ವಿಚಾರದ ಕುರಿತು ಕುರಿತ ಸಮಾಲೋಚನಾ ಸಭೆ ಅ.24ರಂದು ಕೊಕ್ಕಡ ಅಪೇಕ್ಷಾ ಸಭಾಂಗಣದಲ್ಲಿ ನಡೆಯಿತು.


ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಹೋರಾಟಕ್ಕೆ ಸಂಬಂಧಿಸಿ ವೇದಿಕೆಯೊಂದನ್ನು ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ’ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ’ ಎಂಬ ಹೆಸರಿನಲ್ಲಿ ವೇದಿಕೆ ರಚಿಸಿ ಶ್ರೀ ಕ್ಷೇತ್ರದ ಜಮೀನು ಉಳಿಸಿಕೊಳ್ಳುವ ಸಲುವಾಗಿ ಸದ್ರಿ ವೇದಿಕೆ ಮೂಲಕ ಸರಕಾರವನ್ನು ಸಂಪರ್ಕಿಸುವುದು, ಧರಣಿ, ಕಾನೂನು ಹೋರಾಟ, ಆಂದೋಲನ ಕೈಗೊಳ್ಳುವ ಬಗ್ಗೆ ಹಾಗೂ ನ.5ರಂದು ಮಂಗಳೂರಿನಲ್ಲಿ ವೇದಿಕೆಯಿಂದ ಪತ್ರಿಕಾಗೋಷ್ಟಿ ನಡೆಸುವುದು. ನ.11ರಿಂದ ಸೌತಡ್ಕ ಕ್ಷೇತ್ರದಲ್ಲಿ ಅನಿರ್ಧಿಷ್ಟ ಧರಣಿ ಪ್ರಾರಂಭಿಸಲು ತೀರ್ಮಾನವಾಯಿತು.


ಪದಾಧಿಕಾರಿಗಳ ಆಯ್ಕೆ:
’ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ, ಕಾರ್ಯದರ್ಶಿಯಾಗಿ ಶ್ರೀಕೃಷ್ಣ ಭಟ್ ಕುಡ್ತಲಾಜೆ, ಪ್ರಶಾಂತ ರೈ ಗೋಳಿತ್ತೊಟ್ಟು, ವಿಶ್ವನಾಥ ಶೆಟ್ಟಿ ನೆಲ್ಯಾಡಿ, ತುಕ್ರಪ್ಪ ಶೆಟ್ಟಿ ನೂಜೆ, ಮೋಹನ ರೈ ಕುಂಟಾಲಪಲ್ಕೆ. ಕಾರ್ಯದರ್ಶಿಯಾಗಿ ಶ್ಯಾಮರಾಜ್ ಪಟ್ರಮೆ, ಸುನೀಶ್ ನಾಯ್ಕ್, ಗಣೇಶ್ ಕಾಶಿ, ಹರಿಶ್ಚಂದ್ರ ಜೋಡುಮಾರ್ಗ, ದಯಾನೀಶ್ ಕೊಕ್ಕಡ, ಕೋಶಾಧಿಕಾರಿಯಾಗಿ ವಿಶ್ವನಾಥ ಕೊಲ್ಲಾಜೆ. ಸದಸ್ಯರಾಗಿ ಲಕ್ಷ್ಮೀನಾರಾಯಣ ಉಪಾರ್ಣ, ಗೋಪಾಲಕೃಷ್ಣ ಭಟ್ ಮುನ್ನಡ್ಕ, ಎ.ಎನ್ ಶಬರಾಯ, ಪದ್ಮನಾಭ ಆಚಾರ್ಯ, ಚರಣ್ ಕೊಕ್ಕಡ, ಗಣೇಶ್ ಪಿ.ಕೆ, ಧನಂಜಯ ಪಟ್ರಮೆ, ಕೃಷ್ಣಪ್ಪ ಗೌಡ ಪೂವಾಜೆ, ಧರ್ಮರಾಜ್ ಅಡ್ಕರಿ, ಜಯಂತ ಗೌಡ ಮಾಸ್ತಿಕಲ್ಲು, ಜಾರಪ್ಪ ಗೌಡ ಸಂಕೇಶ, ಲಕ್ಷ್ಮೀನಾರಾಯಣ, ವಿಶ್ವನಾಥ ಮೀಯಾಳ, ಗಣೇಶ ಪೂಜಾರಿ, ಶೀನ ನಾಯ್ಕ, ಸಲಹೆಗಾರರಾಗಿ ಬಿ.ಯಂ.ಭಟ್, ಪ್ರಶಾಂತ್, ವೆಂಕಟ್ರಮಣ ಡೆಂಜ ಅವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here