ಬೀಡಿ ಕಳವು ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್‌ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕಳವು ಮಾಡಿದ ಪ್ರಕರಣದ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಉಳ್ಳಾಲದಲ್ಲಿ ಬಂಧಿಸಿದ್ದಾರೆ.


ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ ಮಹಮ್ಮದ್ ಕುಂಞಿ ಬಂಧಿತ ಆರೋಪಿ. ಇವರು 2022ರಲ್ಲಿ ಕೂರ್ನಡ್ಕದ ಬೀಡಿ ಬ್ರ್ಯಾಂಚ್‌ವೊಂದರಿಂದ ಸುಮಾರು 22ಸಾವಿರ ರೂ.ಮೌಲ್ಯದ ಬೀಡಿಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದರು. ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.

ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ನಗರ ಠಾಣಾ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮತ್ತು ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ನಿರ್ದೇಶನ ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರ ಮಾರ್ಗದರ್ಶನದಂತೆ ಸಿಬ್ಬಂದಿಗಳಾದ ವಸಂತ ಗೌಡ ಮತ್ತು ಬಸವರಾಜು ಅವರು ಆರೋಪಿಯನ್ನು ಉಳ್ಳಾಲದ ಕೆಸಿ ರೋಡ್ ಎಂಬಲ್ಲಿ ಅ.26ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here