ಕೋಲ್ಪೆ ಬಳಿ ಲಾರಿ ದೋಸ್ತ್ ವಾಹನ ಅಪಘಾತ ಪ್ರಕರಣ:ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ , 1000 ರೂ. ದಂಡ ವಿಧಿಸಿದ ಪುತ್ತೂರು ನ್ಯಾಯಾಲಯ

0

ಪುತ್ತೂರು :ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಬಳಿ ಫೆ.25.2021 ರಂದು ಲಾರಿ ಹಾಗೂ ದೋಸ್ತ್ ವಾಹನ ನಡುವೆ ಡಿಕ್ಕಿ ಸಂಭವಿಸಿ ದೋಸ್ತ್ ವಾಹನ ಚಾಲಕ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಹೆಚ್ಚುವರಿ ಸಿವಿಲ್ ನ್ಯಾಯಾಧಿಶರಾದ ಎಚ್ ಅರ್ ಶಿವಣ್ಣ ರವರು ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ಒಂದು ಸಾವಿರ ರೂ ದಂಡ ವಿಧಿಸಿ ಅ.25 ರಂದು ತೀರ್ಪು ಪ್ರಕಟಿಸಿದ್ದಾರೆ.


ಹಾಸನ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಅಶೋಕ್ ಲೈಲ್ಯಾಂಡ್ ದೋಸ್ತ್ ಗಾಡಿ ನಡುವೆ ಈ ಡಿಕ್ಕಿ ಸಂಭವಿಸಿತ್ತು. ಪರಿಣಾಮ ದೋಸ್ತ್ ಗಾಡಿ ಚಾಲಕ ಚೇತನ್ ರವರಿಗೆ ಗಂಭೀರ ಗಾಯವಾಗಿ ಅವರನ್ನು ಚಿಕಿತ್ಸೆಯ ಬಗ್ಗೆ ಪುತ್ತೂರು ಆಸ್ಪತ್ರೆಗೆ ತರುವಾಗ ಆಸ್ಪತ್ರೆಯ ಬಳಿ ಮೃತ ಪಟ್ಟಿದ್ದರು.


ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧಿಶರು ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ ಒಂದು ಸಾವಿರ ರೂ ದಂಡ ವಿಧಿಸಿ ಆದೇಶಿಸಿದ್ದಾರೆ.
ಸರಕಾರದ ಪರವಾಗಿ ಅಭಿಯೋಜಕರಾದ ಕವಿತಾ ವಾದ ಮಂಡಿಸಿದರು.

LEAVE A REPLY

Please enter your comment!
Please enter your name here