





ಪುತ್ತೂರು: ಬೈಕೊಂದು ಪಿಕ್‌ಅಪ್ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದು ಪಲ್ಟಿಗೊಂಡು ಬೈಕ್ ಸವಾರ ಗಾಯಗೊಂಡ ಘಟನೆ ಕುಂಬ್ರದಲ್ಲಿ ಅ.27 ರಂದು ನಡೆದಿದೆ.



ಬೆಳ್ಳಾರೆಯಿಂದ ಪುತ್ತೂರು ಕಡೆಗೆ ರಝಾಕ್ ಮುಸ್ಲಿಯಾರ್ ಕರಿಂಬಿಲ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಕುಂಬ್ರ ಜಂಕ್ಷನ್‌ನಲ್ಲಿ ಪಿಕ್‌ಅಪ್ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಝಾಕ್‌ರವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯರು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ.











