ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿಯೆಂದ ಕಾಂಗ್ರೇಸ್‌ನ ಬಿ.ಕೆ ಹರಿಪ್ರಸಾದ್ ಕ್ಷಮೆ ಕೇಳಲಿ-: ಅರುಣ್ ಕುಮಾರ್ ಪುತ್ತಿಲ

0

ಪುತ್ತೂರು: ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ. ಬಿ.ಕೆ.ಹರಿಪ್ರಸಾದ್ ಕ್ಷಮೆ ಕೇಳಲಿ ಎಂದು ಹಿಂದು ಸಂಘಟನೆಗಳ ಮತ್ತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.

ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ. ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯಾಗಿ ಮಾತನಾಡಿ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನವಿದು.

ಹಿಂದೂ ಸಮಾಜಕ್ಕೆ ಪ್ರಾತಃಸ್ಮರಣೀಯರಾಗಿರುವ ಶ್ರೀಗಳಿಗೆ ಈ ರೀತಿಯ ಹೇಳಿಕೆ ನೀಡಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಮಾಡಿರುವ ಅಪಮಾನ. ಬಿ.ಕೆ ಹರಿಪ್ರಸಾದ್ ಸ್ವಾಮಿಜೀಯವರಲ್ಲಿ ಕ್ಷಮೆಯಾಚಿಸಬೇಕು ಇಲ್ಲದಿದ್ದಲ್ಲಿ ಮುಂದೆ ನಡೆಯುವ ಎಲ್ಲಾ ಬೆಳವಣಿಗೆಗಳಿಗೆ ಅವರೇ ಕಾರಣರಾಗುತ್ತಾರೆಂದು ಎಂದು ಅರುಣ್ ಕುಮಾರ್ ಪುತ್ತಿಲ ಅವರು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here