ಪುತ್ತೂರು: ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿಯೆಂದ ಕಾಂಗ್ರೇಸ್ನ ಬಿ.ಕೆ ಹರಿಪ್ರಸಾದ್ ಅವರು ದೊಡ್ಡ ತಪ್ಪು ಮಾಡಿದ್ದಾರೆ. ಇದನ್ನು ವಿಶ್ವಹಿಂದು ಪರಿಷದ್ ದಕ್ಷಿಣ ಪ್ರಾಂತ ಉಪಾಧ್ಯಕ್ಷನಾಗಿ ನಾನು ಖಂಡಿಸುತ್ತೇನೆ ಎಂದು ಯು.ಪೂವಪ್ಪ ಅವರು ತಿಳಿಸಿದ್ದಾರೆ.
ಹಿಂದು ಸಂಸ್ಕೃತಿ, ಸಂಪ್ರದಾಯ, ನಂಬಿಕೆಗಳಿಗೆ ಬಿ.ಕೆ.ಹರಿಪ್ರಸಾದ್ ಅವರು ಶ್ರೀಗಳ ವಿರುದ್ಧ ಹೇಳಿಕೆ ನೀಡುವ ಮೂಲಕ ಅಪಮಾನ ಮಾಡಿದ್ದಾರೆ. ತಕ್ಷಣ ಬಿ.ಕೆ ಹರಿಪ್ರಸಾದ್ ಅವರು ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದ್ದಾರೆ.