ಪುತ್ತೂರು: ಅರಿಯಡ್ಕ ಜುಮಾ ಮಸೀದಿಯ ವಾರ್ಷಿಕ ಮಹಾಸಭೆ ಅ.27ರಂದು ಅರಿಯಡ್ಕ ಜುಮಾ ಮಸೀದಿ ವಠಾರದಲ್ಲಿ ಅಧ್ಯಕ್ಷರಾದ ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸ್ಥಳೀಯ ಖತೀಬ್ ಅಬ್ದುಲ್ ಜಲೀಲ್ ಸಖಾಫಿ ಜಾಲ್ಸೂರು ದುವಾ ನಿರ್ವಹಿಸಿ ಚುನಾವಣಾ ಪ್ರಕ್ರಿಯೆಗಳಿಗೆ ನೇತೃತ್ವ ನೀಡಿದರು. ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಪುನರಾಯ್ಕೆಯಾದರು.
ಉಪಾಧ್ಯಕ್ಷರಾಗಿ ಎ. ಆರ್ ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಹಾಜಿ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಪನೆಕ್ಕಳ ಹಾಗೂ ಯೂಸುಫ್ ಕೋರಿಕ್ಕಾರು, ಕೋಶಾಧಿಕಾರಿಯಾಗಿ ರಿಯಾಝ್ ಶೇಖಮಲೆ ಆಯ್ಕೆಯಾದರು. ಸದಸ್ಯರುಗಳಾಗಿ ಪಿ ಎಂ ಹನೀಫ್, ಪಿ ಎಂ ಯೂಸುಫ್ ಹಾಜಿ, ಹನೀಫ್ ಪಟ್ಲಕಾನ, ಅಬ್ದುಲ್ಲ ಜಾರತ್ತಾರು, ಯೂಸುಫ್ ಬಂಡಸಾಲೆಯವರನ್ನು ಆಯ್ಕೆ ಮಾಡಲಾಯಿತು. ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಅವರು ಕಳೆದ 45 ವರ್ಷಗಳಿಂದ ಜಮಾಅತ್ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.