ನೆಲ್ಯಾಡಿ: ಗ್ಯಾಸ್ ಟ್ಯಾಂಕರ್‌ವೊಂದು ರಸ್ತೆಗೆ ಅಡ್ಡವಾಗಿ ಪಲ್ಟಿಯಾದ ಪರಿಣಾಮ ಸಂಚಾರಕ್ಕೆ ಅಡ್ಡಿ ಉಂಟಾದ ಘಟನೆ ಅ.29ರಂದು ರಾತ್ರಿ ಮಂಗಳೂರು – ಬೆಂಗಳೂರು ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ನೀರಕಟ್ಟೆಯಲ್ಲಿ ಪಲ್ಟಿಯಾಗಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿ ಬಳಿಕ ಸುಗಮ ಸಂಚಾರ ನಡೆಯಿತು ಎಂದು ವರದಿಯಾಗಿದೆ.