ನರೇಂದ್ರ ಪ.ಪೂ.ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ‍್ಯಾಗಾರ ಪ್ರೇರಣಾ 2024- ಸಮಾರೋಪ ಸಮಾರಂಭ

0

ಪುತ್ತೂರು: ಗುರಿ ತಲುಪಲು ಸಿಗುವ ಅವಕಾಶಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವುದನ್ನು ಅರಿತುಕೊಳ್ಳಬೇಕು.ಗುರಿಯ ಕಡೆಗೆ ಇಡುವ ಪ್ರತಿಯೊಂದು ಹೆಜ್ಜೆಯೂ ಆ ದೂರವನ್ನು ಒಂದು ಹೆಜ್ಜೆಯಷ್ಟು ಕಡಿಮೆ ಮಾಡುತ್ತದೆ.ಸಿಗುವ ಸಣ್ಣ ಪುಟ್ಟ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಕುಶಲತೆಯನ್ನು ಮೈಗೂಡಿಸಿಕೊಳ್ಳಬೇಕು.ಸಾವಿರ ಮೈಲಿಯ ಪ್ರಯಾಣವೂ ಮೊದಲ ಹೆಜ್ಜೆಯಿಂದಲೇ ಪ್ರಾರಂಭವಾಗುತ್ತದೆ.ಇಂತಹ ಅವಕಾಶಗಳು ಯಶಸ್ಸನ್ನು ತಲುಪುವ ಏಣಿ ಇದ್ದಂತೆ. ಎಂದು ಪುತ್ತೂರಿನ ಉದ್ಯಮಿಗಳಾದ ಸತೀಶ್ ರೈ ಕಟ್ಟಾವು ಇವರು ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2024 ಇದರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.


ವಿದ್ಯಾರ್ಥಿಗಳಿಗೆ ಹೊಸ ಜಗತ್ತಿನ ನಿಯಮಗಳ ಪರಿಚಯ ಮಾಡುವ ಜೊತೆಗೆ ಸೂಕ್ತ ಜ್ಞಾನ ನೀಡುವುದು ಅವಶ್ಯಕವಾಗಿದೆ.ಇಂದಿನ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಪರಿವರ್ತನೆ ತಂದು ಕಲಿಕೆಯಲ್ಲಿ ಆಸಕ್ತಿ ಮೂಡಿಸವಂತೆ ಮಾಡುತ್ತದೆ.ಸಮಾಜಕ್ಕೆ ಒಬ್ಬ ಪರಿಣಿತ ಶಕ್ತಿಯಾಗಿ ಬದುಕು ಸಾಗಿಸಬೇಕು ಎಂದು ಹೇಳಿದರು.


ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ದೀಪಾ ನಾಯಕ್ ರವರು ಮಾತನಾಡುತ್ತಾ, ಇಂತಹ ಕಾರ‍್ಯಾಗಾರಗಳು ವಿದ್ಯಾರ್ಥಿಗಳನ್ನು ರಚನಾತ್ಮಕ ಕಾರ‍್ಯಗಳಲ್ಲಿ ಪ್ರೇರೇಪಿಸುತ್ತದೆ.ಅಂಕಗಳೊಂದಿಗೆ ವಿವಿಧ ಕೌಶಲಗಳನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಜ್ಞಾನ ಸಂಪನ್ನರಾಗಿ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಹಾಗೂ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.


ಈ ಕಾರ‍್ಯಾಗಾರದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ,ಸಮಯ ಪರಿಪಾಲನೆ,ಒತ್ತಡ ನಿವಾರಣೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ‍್ಯಕ್ರಮವನ್ನು ಆಯೋಜಿಸಲಾಯಿತು. ಈ ಅವಧಿಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ನಡೆಸಿಕೊಟ್ಟರು. ಮನುಷ್ಯನ ಜೊತೆಗೆ ಭೂಮಿ ಮೇಲೆ ಹಾವುಗಳೂ ಕೂಡ ಯಾವ ರೀತಿ ಬದುಕುತ್ತಿವೆ. ಮತ್ತು 4700 ಕ್ಕಿಂತಲೂ ಹೆಚ್ಚು ಹಾವುಗಳನ್ನು ರಕ್ಷಿಸುವುದರ ಜೊತೆಗೆ ಹಾವುಗಳ ಸೌಮ್ಯ ಸ್ವಭಾವ ಮತ್ತು ಪರಿಸರದ ಜೊತೆ ಅದರ ಸಂಬಂಧದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಾವು ಮತ್ತು ನಾವು ಉರಗ ಮಾಹಿತಿ ಕಾರ‍್ಯಕ್ರಮವನ್ನು ಪುತ್ತೂರಿನ ಉರಗ ಸಂರಕ್ಷಕರಾದ ತೇಜಸ್ ಇವರು ನಡೆಸಿಕೊಟ್ಟರು.


ವಿದ್ಯಾರ್ಥಿಗಳಿಗೆ ಆಕರ್ಷಕ ಮೋಜಿನ ಆಟಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಆಡಿಸಿದರು.ವಿಜ್ಞಾನ ಪ್ರಯೋಗಗಳ ವೀಕ್ಷಣೆ ಕಾಲೇಜಿನ ಪ್ರಯೋಗಾಲಯಗಳಲ್ಲಿ ನಡೆಯಿತು. ಈ ಕಾರ್ಯಾಗಾರಕ್ಕೆ ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಯಿತು.ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.ಪ್ರತೀ ವರ್ಷವು ಇಂತಹ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿ ಎಂಬ ತಮ್ಮ ಆಶಯವನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸಿಂಚನಾ ಕೆ.ಎಸ್. ಕಾರ‍್ಯಕ್ರಮವನ್ನು ನಿರೂಪಿಸಿ,ವಂದಿಸಿದರು.

LEAVE A REPLY

Please enter your comment!
Please enter your name here