ಕಳ್ಳತನ ಪ್ರಕರಣ – ಇಬ್ಬರ ಬಂಧನ

0

ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ತಂಡದ ಕಾರ್ಯಾಚರಣೆ

ವಿಟ್ಲ: ಮನೆ ಹಾಗೂ ಅಂಗನವಾಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದ ಅಪರಾದ ತಂಡದ ಸಿಬ್ಬಂದಿಗಳು ಅ.29ರಂದು ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಮಾಣಿ ಜಂಕ್ಷನ್ ನಲ್ಲಿ ಬಂಧಿಸಿದ್ದಾರೆ.


ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮದ ಧರ್ಮನಗರ ನಿವಾಸಿ ಹಸನಬ್ಬರವರ ಪುತ್ರ ಮಹಮ್ಮದ್ ರಿಯಾಜ್ ಹಸನಬ್ಬ ಯಾನೇ ರಿಯಾಜ್(38 ವ.) ಹಾಗೂ ಉಳ್ಳಾಲ ತಾಲೂಕು ಹಳೆಕೋಟೆ ನಿವಾಸಿ ಅಬ್ದುಲ್ ರಹಿಮಾನ್ ರವರ ಪುತ್ರ ಮೊಹಮ್ಮದ್ ಇಂತಿಯಾಜ್ (38 ವ.) ಬಂಧಿತ ಆರೋಪಿಗಳು.


ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಜಾಡು ಹಿಡಿದು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ವಿಟ್ಲ ಠಾಣಾ ವ್ಯಾಪ್ತಿಯ ಮಿತ್ತೂರು ಹಾಗೂ ಕೊಡಾಜೆಯಲ್ಲಿ ನಡೆದ ಮನೆ ಕಳವು ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿಯಿಂದ ನಡೆದ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.


ಬಂಧಿತ ಆರೋಪಿಗಳಿಂದ ರೂ 1,35,000 ಮೌಲ್ಯದ ಗ್ಯಾಸ್ ಸಿಲಿಂಡರ್, ಮನೆ ಸಾಮಗ್ರಿಗಳು , ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ರೂ 1,50,000 ಮೌಲ್ಯದ ಒಂದು ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,85,೦೦೦ ಎಂದು ಅಂದಾಜಿಸಲಾಗಿದೆ.


ಒಂದನೇ ಆರೋಪಿ ಮಹಮ್ಮದ್ ರಿಯಾಜ್ ಹಸನಬ್ಬ ಯಾನೇ ರಿಯಾಜ್ ಎಂಬಾತನ ವಿರುದ್ದ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ನಗರ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ದ.ಕ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಯತೀಶ್ ಎನ್. ಮತ್ತು ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ರಾಜೇಂದ್ರ ಡಿ. ಎಸ್. ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧಕ್ಷಕರಾದ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ನಾಗರಾಜ್ ಹೆಚ್. ಈ. ರವರ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್, ಕೌಶಿಕ್ ಸಿಬ್ಬಂದಿಗಳಾದ ಉದಯ ರೈ, ರಾಧಾಕೃಷ್ಣ ,ರಕ್ಷೀತ್ ರೈ,ಶ್ರೀಧರ ಸಿ ಎಸ್, ಕೃಷ್ಣ ನಾಯ್ಕ್, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್,ಸತೀಶ್ ,ಗಣಕಯಂತ್ರ ವಿಭಾಗದ ಸಂಪತ್, ದಿವಾಕರ್ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here