ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿ.ಭಾಸ್ಕರ ಬಿ ಅವರಿಗೆ ನುಡಿನಮನ

0

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ದಿ.ಭಾಸ್ಕರ ಬಿ ಒಬ್ಬ ಅದ್ಭುತ ವ್ಯಕ್ತಿತ್ವ ಉಳ್ಳವರು. ಆದರೆ ಇಂದು ಇಡೀ ವಿದ್ಯಾ ಸಂಸ್ಥೆ ಯ ಒಂದು ದೊಡ್ಡ ಶಕ್ತಿಯೇ ಕಳಚಿಕೊಂಡ ಹಾಗಿದೆ. ವಿದ್ಯಾಸಂಸ್ಥೆಗೆ ಹಗಲಿರುಳು ದುಡಿದು ಉತ್ತುಂಗಕ್ಕೇರಿಸಿದ ಕೀರ್ತಿ ಇವರದು.ಊರಿಗೆ ಹಾಗೂ ಕುಟುಂಬಕ್ಕೆ ಆಧಾರವಾಗಿದ್ದ ಭಾಸ್ಕರ್ ಅವರ ವ್ಯಕ್ತಿತ್ವ ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.


ಇವರು ಪುತ್ತೂರಿನ ಸ್ವಾಮಿ ಕಲಾ ಮಂದಿರದಲ್ಲಿ ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅವರಿಗೆ ನಡೆದ ನುಡಿನಮನ ಕಾರ್ಯಕ್ರಮ ದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಕೋಶಾಧಿಕಾರಿ ಅಚ್ಯುತ ನಾಯಕ್, ಚಾಣಕ್ಯ ವಿಶ್ವವಿದ್ಯಾನಿಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ವೆಂಕಟೇಶ್, ದಿ.ಭಾಸ್ಕರ್ ಅವರ ಸಹೋದರ ಯೋಗೀಶ್.ಬಿ ಮುಂತಾದವರು ನುಡಿನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಕೃಷ್ಣ ಭಟ್ ಕೆ.ಎಂ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ನಿವೃತ್ತ ಉಪನ್ಯಾಸಕರು ಭೋಧಕ ಹಾಗೂ ಭೋಧಕೇತರ ಸಿಬ್ಬಂದಿಗಳು, ದಿ.ಭಾಸ್ಕರ ಅವರ ಕುಟುಂಬಸ್ಥರು ಹಾಗೂ ಮಾಣಿ ಪೆರಾಜೆ ಗ್ರಾಮದ ಬಂಧು ಮಿತ್ರರು ಉಪಸ್ಥಿತರಿದ್ದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ರವೀಂದ್ರ ಕಾರ್ಯಕ್ರಮ ವನ್ನು ನಿರೂಪಿಸಿದರು. ಕಾರ್ಯಕ್ರಮದ ನಂತರ ಮೃತರ ಸದ್ಗತಿ ಪ್ರಯುಕ್ತ ಭೋಜನ ಕೂಟವನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಗೆ ಅವಿರತವಾಗಿ ದುಡಿದ ದಿ.ಭಾಸ್ಕರ ಅವರ ಇಬ್ಬರು ಮಕ್ಕಳ ಮುಂದಿನ ಭವಿಷ್ಯದ ನಿಟ್ಟಿನಲ್ಲಿ ಅವರ ಸಂಪೂರ್ಣ ವಿದ್ಯಾಭ್ಯಾಸದ ಖರ್ಚುವೆಚ್ಚಗಳನ್ನು ವಿವೇಕಾನಂದ ವಿದ್ಯಾವರ್ಧಕ ಸಂಘವೇ ಭರಿಸುವುದೆಂದು ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಆಶ್ವಾಸನೆಯನ್ನು ನೀಡಿದ್ದಾರೆ.

LEAVE A REPLY

Please enter your comment!
Please enter your name here