ಕಾವು:ಬುಶ್ರಾ ವಿದ್ಯಾ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿ ಮಿತೇಶ್ ನಾಯ್ಕ ಸಾಂದೀಪನಿ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರು ತಾಲೂಕಿನ ಬಡಗನ್ನೂರು ಬಳ್ಳಕ್ಕ ದ ಜಗದೀಶ ನಾಯ್ಕ ಮತ್ತು ಸರೋಜಿನಿ ದಂಪತಿಗಳ ಪುತ್ರನಾಗಿರುತ್ತಾನೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ನೆಟ್ಟಾರು ತರಬೇತಿಯನ್ನು ನೀಡಿರುತ್ತಾರೆ ಎಂದು ಮುಖ್ಯ ಶಿಕ್ಷಕಿ ದೀಪಿಕಾ ಚಾಕೋಟೆ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.