ಸೈಂಟ್ ವಿಕ್ಟರ‍್ಸ್‌ನಲ್ಲಿ ಕನ್ನಡ ರಾಜ್ಯೋತ್ಸವ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ವಠಾರದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ನೇತೃತ್ವದೊಂದಿಗೆ, ಮಾಯಿದೆ ದೇವುಸ್ ಪ್ರಾಥಮಿಕ ಶಾಲೆ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಿದರು.


ರಾಷ್ಟ್ರಧ್ವಜ, ನಾಡಧ್ವಜಾರೋಹಣ ನೆರವೇಸಿದಿ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂದನೀಯ ಫಾ| ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ಕನ್ನಡ ನಮ್ಮ ಸಂಸ್ಕೃತಿ, ನಮ್ಮ ಭಾಷೆಗಳ ಬಗ್ಗೆ ಕನ್ನಡಿಗರಾದ ನಮಗೆ ಹೆಮ್ಮೆ ಇರಬೇಕು. ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸಲು ಪ್ರಯತ್ನಿಸಿದ ಕವಿ ಪಂಪ, ರನ್ನ, ಕುವೆಂಪು, ಬೇಂದ್ರೆ, ಶಿವರುದ್ರಪ್ಪ ಹಾಗೂ ಎಲ್ಲಾ ಕವಿಗಳಂತೆ ನಾವು ಕೂಡ ನಮ್ಮ ಶ್ರೀಮಂತ ಸಾಹಿತ್ಯವನ್ನು ಉಳಿಸಬೇಕು. ಜಾತಿ, ಮತಗಳ ಭೇದ ಬಿಟ್ಟು ಕನ್ನಡವನ್ನು ಉಳಿಸಲು ಶ್ರಮಿಸೋಣ ಎಂದರು.


ಸಂತ ವಿಕ್ಟರ್ ಬಾಲಿಕಾ ಪ್ರೌಢ್ರ ಶಾಲೆಯ ಮುಖ್ಯಸ್ಥೆ ರೋಸಲಿನ್ ಪ್ಲೇವಿ ಲೋಬೊ, ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಸ್ಥೆ ಜಾನೆಟ್ ಡಿಸೋಜ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯಸ್ಥ ಹ್ಯಾರಿ ಡಿ ಸೋಜ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿಕೊಸ್ತಾ, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಪಿ.ಎಂ ಅಶ್ರಫ್‌ರವರು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳ್ಲು ರಾಷ್ಟ್ರ ಗೀತೆ, ನಾಡ ಗೀತೆಯನ್ನು ಹಾಡಿದರು. ಕನ್ನಡ ಶಿಕ್ಷಕಿ ಭವ್ಯ ಸ್ವಾಗತಿಸಿದರು. ವಿದ್ಯಾರ್ಥಿನಿ ಧೃತಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಶಾಲಾ ಸಭಾಭವನದಲ್ಲಿ ನಡೆದ ಸಾಂಸ್ಕತಿಕ ಕಾರ್ಯಕ್ರಮದಲ್ಲಿ ರೋಸಲಿನ್ ಪ್ಲೇವಿ ಲೋಬೊ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಪಿ.ಎಂ ಅಶ್ರಫ್ ಉಪಸ್ಥಿತರಿದ್ದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಚಾರುಲಿಶಾ ದಿನದ ಮಹತ್ವ ತಿಳಿಸಿದರು. ಸಾಹಿತ್ಯ ಹಾಗೂ ಸಾಂಸ್ಕ್ರತಿಕ ಸಂಘದ ಅಧ್ಯಕ್ಷೆ ಫಾತಿಮಾ ಫಿಝ ಸ್ವಾಗತಿಸಿ, ಕಾರ್ಯದರ್ಶಿ ತಸ್ನೀಮ್ ಫಾತಿಮಾ ವಂದಿಸಿದರು. ಶಿಕ್ಷಕಿ ಭವ್ಯ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿನಿಯರಾದ ಧನ್ಯಶ್ರೀ ಹಾಗೂ ಫಾತಿಮತ್ ನಸೀಬಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here