ಕೋಡಿಂಬಾಳ: ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಬಿದ್ದ ದೂಪದ ಮರ- ಅರಣ್ಯ ಇಲಾಖೆಯ ವಿರುದ್ದ ಸಾರ್ವಜನಿಕರ ಆಕ್ರೋಶ

0

ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಆಗ್ರಹ- ಪ್ರತಿಭಟನೆ

ಕಡಬ: ಕಡಬ ಸುತ್ತಮುತ್ತಲೂ ರಸ್ತೆ ಬದಿಯ ದೂಪದ ಮರಗಳು ರಸ್ತೆಗೆ ಬಿದ್ದು ಜೀವ ಹಾನಿಯಾಗುತ್ತಿದ್ದರೂ ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆಯ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಆಗ್ರಹಿಸಿದ್ದಾರೆ.
ಇಂದು ಕೋಡಿಂಬಾಳದಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಟ್ಯಾಪಿಂಗ್ ಮಾಡಿದ ದೂಪದ ಮರ ಬಿದ್ದು ಎಡಮಂಗಲ ನಿವಾಸಿಯೋರ್ವರು ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಸ್ಥಳೀಯರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ
ಕಡಬ ಸುತ್ತಮುತ್ತಲೂ ಅರಣ್ಯ ಇಲಾಖೆ ದೂಪದ ಮರಗಳನ್ನು ಹಾಲು ಮಡ್ಡಿ ತೆಗೆಯಲು ಟೆಂಡರ್ ಕೊಡುತ್ತಿದ್ದು, ಟ್ಯಾಪಿಂಗ್ ಮಾಡಿದ ಮರಗಳು ಮತ್ತೆ ರಸ್ತೆಗೆ ಉರುಳಿ ಬೀಳುತ್ತಿದೆ. ಹೀಗಿದ್ದರೂ ಅರಣ್ಯ ಇಲಾಖೆ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದೆ. ರಸ್ತೆ ಬದಿಯಲ್ಲಿರುವ ಇಂತಹ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಅಲ್ಲದೆ ಮೃತರ ಕುಟುಂಬಕ್ಕೆ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪ್ರತಿಭಟನಾ ನಿರತರು
ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿ ಸಾರ್ವಜನಿಕರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here