ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.2ರಂದು ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ದೀಪಾವಳಿಯ ಅಂಗವಾಗಿ ವಸ್ತ್ರ ವಿತರಣೆ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯದ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್ ಅವರನ್ನು ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಅದ್ಧೂರಿಯಾಗಿ ಸ್ವಾಗತಿಸಿದರು.
ಮಂಗಳೂರಿಂದ ರಸ್ತೆ ಮೂಲಕ ಆಗಮಿಸಿ ಡಿ.ಕೆ ಶಿವಕುಮಾರ್ ಅವರನ್ನು ಬೊಳುವಾರು ವೃತ್ತದ ಬಳಿ ಸ್ವಾಗತಿಸಲಾಯಿತು. ನಂತರ ಕಾರ್ಯಕ್ರಮ ನಡೆಯುವ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಕರೆತರಲಾಯಿತು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಸೀಪ್ ಅವರನ್ನು ಹಾರ ಹಾಕಿ, ಹೂ ಗುಚ್ಚ ನೀಡಿ ಹಾಗೂ ಪಕ್ಷದ ಪ್ರಮುಖರು ಸ್ವಾಗತಿಸಿದರು.
ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಡಾ. ರಾಜರಾಮ್ ಕೆ.ಬಿ., ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಸೇವಾ ದಳದ ಜಿಲ್ಲಾಧ್ಯಕ್ಷ ಜೋಕಿಂ ಡಿ ಸೋಜ, ಧನಂಜಯ ಅಡ್ಪಂಗಾಯ, ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ.ಎಚ್. ಎ ಶಕೂರ್ ಹಾಜಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಪಕ್ಷದ ಪ್ರಮುಖರಾದ ಚಂದ್ರಹಾಸ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಪ್ರಣಾಮ್ ಶೆಟ್ಟಿ ಕೈಕಾರ, ನಗರ ಸಭಾ ಸದಸ್ಯೆ ಶೈಲಾ ಪೈ, ಹರ್ಷದ್ ದರ್ಬೆ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಶ್ರೀ ರಾಮ್ ಪಕ್ಕಳ, ಅನಂತಕೃಷ್ಣ, ವಿಕ್ರಂ ರೈ ಸಾಂತ್ಯ, ನೇಮಾಕ್ಷ ಸುವರ್ಣ, ರವಿಪ್ರಸಾದ್ ಶೆಟ್ಟಿ, ಶಶಿಕಿರಣ್ ರೈ ನೂಜಿಬೈಲು, ಕಮಲೇಶ್ ಸರ್ವೆದೋಳ, ಅನ್ವರ್ ಖಾಸಿಂ, ಫಾರೂಕ್ ಬಾಯಬೆ, ವಿಶ್ವಜಿತ್ ಅಮ್ಮುಂಜ, ವೇದನಾಥ ಸುವರ್ಣ ಸೇರಿದಂತೆ ನೂರಾರು ಮಂದಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.