ಸವಣೂರು: ಸ.ಹಿ.ಪ್ರಾ.ಶಾಲೆ ಸವಣೂರು ಮೊಗರು ಇಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ನ.1ರಂದು ಆಚರಿಸಲಾಯಿತು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಫೀಕ್ ಎಂ.ಎ ರಾಷ್ಟ್ರಧ್ವಜಾರೋಹಣ ಮಾಡುವುದರ ಮೂಲಕ ದೇಶ ಹಾಗೂ ರಾಜ್ಯದ ನಡುವಿನ ಸಂಬಂಧ ಹಾಗೂ ಕರ್ನಾಟಕ ರಾಜ್ಯ ಉದಯವಾದ ಚರಿತ್ರೆಯನ್ನು ತಿಳಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸವಣೂರು ಗ್ರಾಮ ಪಂಚಾಯತ್ ಸದಸ್ಯ ರಝಕ್ ಕೆನರಾ ಕನ್ನಡ ಧ್ವಜಾರೋಹಣ ಮಾಡುವುದರೊಂದಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿಯ ಚರಿತ್ರೆ ಹಾಗೂ ಕಾರ್ಯಕ್ರಮದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ಶಾಲಾ ಪ್ರಭಾರ ಮುಖ್ಯಗುರುಗಳಾದ ಜುಸ್ತಿನಾ ಲಿಡ್ವಿನ್ ಡಿಸೋಜ ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ನುಡಿಗಳನ್ನಾಡಿ ಕಾರ್ಯಕ್ರಮ ಆಗಮಿಸಿದವರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಸಹಾಯಕಿ ಸವಿತಾ, ಶಾಲಾಭಿವೃದ್ದಿ ಸಮಿತಿ ಸದಸ್ಯರುಗಳಾದ ಕೇಶವ, ಉಮ್ಮರ್, ಸಹಶಿಕ್ಷಕರುಗಳಾದ ಕು.ಸವಿತಾ, ಕು.ದಯಾಮಣಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜಾನಕಿ ಕಾರ್ಯಕ್ರಮ ನಿರೂಪಿಸಿ, ಗುಲ್ಸನ್ ಕೌಸರ್ ವಂದಿಸಿದರು.