ಉಪ್ಪಿನಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿ ನ.1ರಂದು 69ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷ ಅಝೀಝ್ ಬಿ.ಕೆ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ನಂದನಾ ಪಿ. ಶೆಟ್ಟಿ, ಶಾಲಾ ಕನ್ನಡ ಶಿಕ್ಷಕಿ ಸಂಧ್ಯಾ ಕನ್ನಡ ರಾಜ್ಯೋತ್ಸವದ ವಿಶೇಷತೆ ಬಗ್ಗೆ ತಿಳಿಸಿದರು.
ಮುಖ್ಯಗುರು ಜಯಶ್ರೀ ಎಂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೀನಾ ಲಸ್ರಾಡೊ ವಂದಿಸಿದರು. ಮೆಹನಾಝ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿಕೊಟ್ಟರು. ಟಿಜಿಟಿ ಶಿಕ್ಷಕಿ ಸುಮನ ಕೆ.ಎಸ್., ವೆಂಕಟರಮಣ ಭಟ್ ಸಹಕರಿಸಿದರು. ಎಸ್.ಡಿ.ಎಂ.ಸಿ ಸದಸ್ಯರಾದ ಪದ್ಮನಾಭ ಶೆಟ್ಟಿ, ಯೋಗಿತಾ, ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಕನ್ನಡ ಅಭಿಮಾನ ಮೆರೆಯುವ ನೃತ್ಯ ಹಾಗೂ ಕನ್ನಡ ಗೀತೆಗಳನ್ನು ಪ್ರಸ್ತುತ ಪಡಿಸಿದರು.