ನೆಲ್ಯಾಡಿ: 9 ರಿಂದ 12ನೇ ತರಗತಿಯಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳಿಗೆ ಜೆಸಿಐ ವತಿಯಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಕೊಣಾಲು ಸರಕಾರಿ ಪ್ರೌಢಶಾಲೆಯ ಐವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ಇವರನ್ನು ನೆಲ್ಯಾಡಿ ಜೆಸಿಐ ಘಟಕದ ವತಿಯಿಂದ ಗೌರವಿಸಲಾಯಿತು.
ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ ಜೆ ಬಂಟ್ರಿಯಾಲ್, ಮಹಿಳಾ ಜೆಸಿಐ ಅಧ್ಯಕ್ಷೆ ಲೀಲಾ ಮೋಹನ್ ಅವರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳನ್ನು ನೆಲ್ಯಾಡಿ ಜೆಸಿಐ ವತಿಯಿಂದ ಗೌರವಿಸಿದರು.
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುವಲ್ಲಿ ಸಹಕರಿಸಿದ ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ ಜೆ ಬಂಟ್ರಿಯಾಲ್ ಅವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕ ಶಶಿಧರ್ ರೈ, ಎಸ್ಡಿಎಮ್ಸಿ ಅಧ್ಯಕ್ಷ ಕಮಲಾಕ್ಷ ಜಿ ಹಾಗೂ ಸದಸ್ಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.