ರಾಮಕುಂಜ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಮತ್ತು ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರಿಗೆ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪ್ರವೀಣ್ ನಾಯಕ್‌ರವರು ಮನವಿ ಮಾಡಿದ್ದಾರೆ.
ಪುತ್ತೂರಿನಲ್ಲಿ ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರದ ವತಿಯಿಂದ ನಡೆದ ’ಅಶೋಕ ಜನ-ಮನ 2024’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಿಗೆ ಈ ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮುತ್ತಪ್ಪ ಪೆರಾಬೆ, ರಾಜ್ಯ ಕಾರ್ಯದರ್ಶಿ ತಿರುಮಲೇಶ್ವರ ಬಿ.ಎಮ್., ಸಮಿತಿಯ ಸದಸ್ಯರಾದ ಮೋನಪ್ಪ ಆಲಂಕಾರು, ಭರತ್ ಪುತ್ತೂರು, ಶಿಲ್ಪಕಲಾ ಕೊಂಬಾರು, ಅತಿಕಮ್ಮ ಕೊಯಿಲ ಉಪಸ್ಥಿತರಿದ್ದರು.