*ಕಾಂಗ್ರೆಸ್ನೊಳಗಿನ ಆಕ್ರೋಶ, ಭ್ರಷ್ಟಾಚಾರಗಳನ್ನು ವಕ್ಫ್ ಮೂಲಕ ಡೈವರ್ಟ್ – ವಿಶ್ವೇಶ್ವರ ಭಟ್ ಬಂಗಾರಡ್ಕ
*ಬಿಜೆಪಿ ಕೈಕಟ್ಟಿ ಕೂತುಕೊಳ್ಳದೆ ಬೀದಿಗಿಳಿದು ಹೋರಾಟ ಮಾಡಲಿದೆ – ಸಂಜೀವ ಮಠಂದೂರು
*ಮತದಾರನ್ನು ಮೋಸ ಮಾಡುತ್ತಿರುವ ಕಾಂಗ್ರೆಸ್- ದಯಾನಂದ ಶೆಟ್ಟಿ
ಪುತ್ತೂರು: ರೈತರ ಜಮೀನನ್ನು ವಕ್ಫ್ಗೆ ಹಸ್ತಾಂತರಿಸುವ ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನ.4ರಂದು ರಾಜ್ಯವ್ಯಾಪಿ ಹೋರಾಟಕ್ಕೆ ಬಿಜೆಪಿ ಕರೆ ನೀಡಿದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ವತಿಯಿಂದ ನ.4ರಂದು ದರ್ಬೆಯಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಬಳಿಕ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪುತ್ತೂರು ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿಶ್ವೇಶ್ವರ ಭಟ್ ಬಂಗಾರಡ್ಕ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿದರು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಸ್ವಾಗತಿಸಿ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ವಂದಿಸಿದರು