ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ-ಕಿಶೋರ್ ಬೊಟ್ಯಾಡಿ, ಅರುಣ್‌ ಕುಮಾರ್‌ ಪುತ್ತಿಲ ಖಂಡನೆ

0

ಪುತ್ತೂರು: ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಯನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ,ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ ಹಾನಿಯಾಗಿದೆಯೆಂದೂ ತಿಳಿದುಬಂದಿದೆ.

ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದುಷ್ಕರ್ಮಿಗಳ ದಾಳಿಯನ್ನು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ,ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ವಿರೋಧಿಸಿದ್ದಾರೆ.

ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲಾದ ಆದ ದಾಳಿಯನ್ನು ಖಂಡಿಸುತ್ತಾ , ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಬೇಕೆಂದು ಅರುಣ್ ಪುತ್ತಿಲ,ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here