puttur:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಪುತ್ತೂರು ತಾಲೂಕು ಮಟ್ಟದ ಜ್ಞಾನವರ್ಷಿಣಿ ಮತ್ತು ಜ್ಞಾನದರ್ಶಿನಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ವಿವಿಧ ಸ್ಪರ್ಧೆಗಳು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಸಹಯೋಗದಲ್ಲಿ ನ.5ರಂದು ನಡೆಯಿತು.
ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ಕುಮಾರ್ ಇವರು ಉದ್ಘಾಟಿಸಿ, ಸ್ಪರ್ಧಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಆಶಾ ಬೆಳ್ಳಾರೆ ವಹಿಸಿ ವಿದ್ಯಾರ್ಥಿಗಳಿಗೆ ಪ್ರಸ್ತುತ ಜಗತ್ತಿನ ಆಗುಹೋಗುಗಳ ಬಗ್ಗೆ ತಿಳಿಸಿ, ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಯೋಗ ಶಿಕ್ಷಣದ ಡಾ.ಐ. ಶಶಿಕಾಂತ್ ಜೈನ್ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೈಕಾರ ಮುಖ್ಯೋಪಾಧ್ಯಾಯ ರಾಮಣ್ಣ ರೈ ಇವರು ಸ್ವಾಗತಿಸಿ, ಅನುರಾಧಾ.ಎ ವಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಆಶಾ ಕೆ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸ್ಪರ್ಧೆಗಳ ಸಂಯೋಜಕರಾಗಿ ಲತಾ ಕುಮಾರಿ ಮತ್ತು ಅವರ ತಂಡ ಸಹಕರಿಸಿದರು.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಭಾಷಣ, ಶ್ಲೋಕ ಕಂಠ ಪಾಠ, ಚಿತ್ರಕಲೆ ಸ್ಪರ್ಧೆ ನಡೆಯಿತು. ಪುತ್ತೂರು ತಾಲೂಕಿನ ವಿವಿಧ ಶಾಲೆಗಳಿಂದ ಸುಮಾರು 250 ವಿದ್ಯಾರ್ಥಿಗಳು ಭಾಗವಹಿಸಿದ್ದರು.