ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಭೇಟಿಯಾದ ಅರುಣ್ ಕುಮಾರ್ ಪುತ್ತಿಲ

0

puttur: ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಭೇಟಿ ಮಾಡಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ವಾಮಿಜೀಯ ಕಾರಿನ ಮೇಲಾದ ದಾಳಿಯ ಘಟನೆಯ ಕುರಿತು ಮಾಹಿತಿ ಪಡೆದುಸ್ವಾಮೀಜಿಯವರನ್ನು ಭೇಟಿ ಮಾಡಿದರು.

ಅವರು ಕಾಸರಗೋಡಿನ ಎಡನೀರು ಸಂಸ್ಥಾನದಲ್ಲಿ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರನ್ನು ಭೇಟಿ ಮಾಡಿದರು.

ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲೆ ಕೇರಳದ ಎಡಪಂಥೀಯ ಸರ್ಕಾರ ಪ್ರೇರಿತ ದಾಳಿಯನ್ನು ಖಂಡಿಸುತ್ತಾ , ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಬೇಕೆಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಜೊತೆ ಬಿಜೆಪಿ ಮುಖಂಡರಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪ್ರೇಮ್ ರಾಜ್ ಆರ್ಲಪದವು, ಕೃಷ್ಣಪ್ರಸಾದ್ ಶೆಟ್ಟಿ, ಕಿಶೋರ್ ಆರ್ಲಪದವು ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here