ಪುತ್ತೂರು:ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25.ವ) ಎಂದು ತಿಳಿದುಬಂದಿದೆ.
ಘಟನಾ ವಿವರ
ಗಣೇಶ್ ಅವರು ಸೋಮವಾರದಂದು ಮನೆಯಲ್ಲಿಯೇ ಸಂಜೆ 4.10ರ ವೇಳೆ ಹುಲ್ಲಿಗೆ ಬಿಡುವ ವಿಷ ಅನಿಲವನ್ನು ಸೇವಿಸಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು(ನ.6)ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ತಂದೆ,ತಾಯಿ,ಸಹೋದರ, ಬಂಧು ಬಳಗವನ್ನು ಅಗಲಿದ್ದಾರೆ.