ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ನೆಲ್ಯಾಡಿ ಸಿರಿ ಘಟಕದಲ್ಲಿ ನಡೆಯಿತು.
ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್‌ರವರು ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತಮ ಕಾರ್ಯಕ್ರಮ ನೀಡುತ್ತಿದೆ. ಈ ದಿನ ನೆಲ್ಯಾಡಿಯಲ್ಲಿ ಹೊಲಿಗೆ ತರಬೇತಿಯನ್ನು ಆಯೋಜಿಸಿ ಸ್ವಾವಲಂಬಿ ಜೀವನ ನಡೆಸಲು ಪ್ರೇರಣೆ ನೀಡಿದ್ದು ಹೆಮ್ಮೆಯ ವಿಚಾರ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡರವರು ಶುಭಹಾರೈಸಿದರು. ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು, ವಲಯ ಮೇಲ್ವಿಚಾರಕ ಆನಂದ ಡಿ.ಬಿ, ಹೊಲಿಗೆ ತರಬೇತಿ ಶಿಕ್ಷಕಿ ಗೀತಾ, ನೆಲ್ಯಾಡಿ ಒಕ್ಕೂಟದ ಉಪಾಧ್ಯಕ್ಷೆ ಸುಮಿತ್ರಾ ಶುಭಹಾರೈಸಿದರು.
ಕಡಬ ತಾಲುಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಹೇಮಾವತಿ ಜೆ ಕಾರ್ಯಕ್ರಮ ನಿರೂಪಿಸಿ, ನಮಿತಾ ಎಸ್ ನೆಟ್ಟಿ ವಂದಿಸಿದರು. ಭಾರತಿ ಪ್ರಾರ್ಥಿಸಿದರು. ವಲಯದ ಸೇವಾ ಪ್ರತಿನಿಧಿಗಳಾದ ವೇದ ಪಿ, ಕವಿತಾ, ಸುಮನ ಸಹಕರಿಸಿದರು.