ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಅತಿಥಿಯಾಗಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಪರಿವೀಕ್ಷಕರಾದ ಭಗಿನಿ ಮೀನಾಕ್ಷಿ ಮಾತಾಜಿ, ಕನ್ನಡ ಹಾಗೂ ಕನ್ನಡ ರಾಜ್ಯೋತ್ಸವದ ಬಗ್ಗೆ ತಿಳಿಸಿದರು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಅವರು ಮಾತನಾಡಿ, ಕನ್ನಡ ಭಾಷೆ ಹಾಗೂ ಕರ್ನಾಟಕದ ಹಿರಿಮೆಯನ್ನು ತಿಳಿಸಿ, ನಮ್ಮ ಮಾತೃಭಾಷೆ, ರಾಜ್ಯಭಾಷೆ ಹಾಗೂ ರಾಷ್ಟ್ರಭಾಷೆಯನ್ನು ಗೌರವಿಸಬೇಕು ಎಂದು ಹೇಳಿದರು. ಶಾಲಾ ಮುಖ್ಯಗುರು ಗಣೇಶ್ ವಾಗ್ಲೆ ಉಪಸ್ಥಿತರಿದ್ದರು.
ದಿವ್ಯಶ್ರೀ ಮಾತಾಜಿ ಸ್ವಾಗತಿಸಿ. ಮಾನ್ಯಶ್ರೀ ಮಾತಾಜಿ ವಂದಿಸಿದರು. ಅಕ್ಷತಾ ಮಾತಾಜಿ ನಿರೂಪಿಸಿದರು. ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.