ಕಸ,ಪ್ಲಾಸ್ಟಿಕ್ ಸುಡದೆ ಗ್ರಾಮದ ಸ್ವಚ್ಛತೆಗೆ ಸಹಕಾರ ನೀಡುವಂತೆ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಮನವಿ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಈಗಾಗಲೇ ಗ್ರಾಪಂನಿಂದ ಸ್ವಚ್ಚತಾ ವಾಹಿನಿ ವಾಹನ ಗ್ರಾಮದಲ್ಲಿ ಸಂಚರಿಸುತ್ತಿದೆ. ಗ್ರಾಮಸ್ಥರು ಯಾರೂ ಕೂಡ ತಮ್ಮ ಮನೆ, ಅಂಗಡಿ, ವಾಣಿಜ್ಯ ಸಂಕೀರ್ಣ, ಶಾಲೆ, ಕಾಲೇಜು ಇತ್ಯಾದಿ ಕಡೆಗಳಲ್ಲಿ ಉತ್ಪತ್ತಿಯಾಗುವ ಕಸ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಸ್ವಚ್ಚತಾ ವಾಹಿನಿ ವಾಹನಕ್ಕೆ ನೀಡುವ ಮೂಲಕ ಸ್ವಚ್ಚ ಗ್ರಾಮಕ್ಕಾಗಿ ಸಹಕರಿಸಬೇಕು ಎಂದು ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಸ್ಥಳೀಯವಾಗಿ ಕಸ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಸುಟ್ಟು ಹಾಕುತ್ತಿರುವ ವಿಷಯ ತಿಳಿದು ಸ್ಥಳಕ್ಕೆ ಅಗಮಿಸಿದ ಅವರು ಕಸ, ಪ್ಲಾಸ್ಟಿಕ್‌ಗಳನ್ನು ಸುಡದಂತೆ ಎಚ್ಚರಿಕೆ ನೀಡಿದ್ದಾರೆ. ಯಾರೂ ಕೂಡ ಕಸ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಬೆಂಕಿ ಹಾಕಿ ಸುಡಬಾರದು, ಕಸ, ಪ್ಲಾಸ್ಟಿಕ್‌ಗಳನ್ನು ಸುಡುವುದು ಕಂಡು ಬಂದರೆ ಅವರ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಗ್ರಾಮದಲ್ಲಿ ಸ್ವಚ್ಛತಾ ವಾಹಿನಿ ವಾಹನ ಸಂಚರಿಸುತ್ತಿದ್ದು ಎಲ್ಲಾದರೂ ವಾಹನ ಬರದೇ ಇದ್ದರೆ ಅಥವಾ ವಾಹನ ಬರಬೇಕು ಎಂದು ಕಂಡು ಬಂದರೆ ತಕ್ಷಣವೇ ಪಂಚಾಯತ್ ಗಮನಕ್ಕೆ ತರುವಂತೆ ತಿಳಿಸಿದ ಅವರು ಹಸಿ,ಒಣ ಕಸಗಳನ್ನು ಸಂಗ್ರಹಿಸುವ ಕೆಲಸ ಆಗುತ್ತಿದ್ದು ಇದಕ್ಕೆ ಸಂಬಂಧಿಸಿದ ತಿಂಗಳ ಶುಲ್ಕವನ್ನು ಪಾವತಿಸುವ ಮೂಲಕ ಗ್ರಾಮಸ್ಥರು ಗ್ರಾಮದ ಅಭಿವೃದ್ದಿಗೆ ಸಹಕಾರ ನೀಡುವಂತೆ ಕೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here