ಪುತ್ತೂರು: ಪುತ್ತೂರಿನ ಮುಕ್ರಂಪಾಡಿಯಲ್ಲಿ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇವರ ವತಿಯಿಂದ ನೂತನವಾಗಿ ನಿರ್ಮಿಸಲ್ಪಟ್ಟ ‘ಬಸ್ಸು ತಂಗುದಾಣ’ದ ಉದ್ಘಾಟನಾ ಕಾರ್ಯಕ್ರಮವು ನ.9ರ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಶಾಸಕ ಅಶೋಕ್ ಕುಮಾರ್ ರೈ ಇವರು ಬಸ್ಸು ತಂಗುದಾಣವನ್ನು ಉದ್ಘಾಟಿಸಲಿದ್ದಾರೆ. ದ್ವಾರಕಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲ ಕೃಷ್ಣ ಭಟ್, ಇವರು ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್, ನಗರ ಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಂದರ ಪೂಜಾರಿ ಬಡಾವು, ನಗರ ಸಭಾ ಸದಸ್ಯ ಶೀನಪ್ಪ ನಾಯ್ಕ್,ಪುತ್ತೂರು ನಗರಸಭೆ ಪೌರಾಯುಕ್ತ ಶ್ರೀ ಮಧು ಎಸ್ ಮನೋಹರ್, ಮತ್ತು ಸಂಪ್ಯ ಠಾಣಾ ಅಧಿಕಾರಿಗಳು ಜಂಬೂರಾಜ್ ಮಹಾಜನ್ ಇವರು ಭಾಗಿಯಾಗಲಿದ್ದಾರೆ.