ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ’- ಉಪನ್ಯಾಸ

0

ರಾಮಕುಂಜ: ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ‘ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರ ‘ ಎಂಬ ವಿಷಯದ ಉಪನ್ಯಾಸ ಕಾರ್ಯಕ್ರಮವು ನಡೆಯಿತು. ಉಪನ್ಯಾಸ ನೀಡಿದ ಧಾರ್ಮಿಕ, ಸಾಮಾಜಿಕ ಮುಖಂಡರಾದ ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರು ಕಾಲೇಜಿನ ಪ್ರೌಢಶಾಲಾ ಮತ್ತು ಪಿಯುಸಿ ವಿಭಾಗದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ” ನಮ್ಮದು ಸಾರ್ಥಕತೆಯ ಜೀವನವಾಗಬೇಕು. ಸಾರ್ಥಕ ಜೀವನದ ಸಾಕಾರವಾಗಬೇಕಾದರೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಪುಟ್ಟ ಪುಟ್ಟ ಸಾಧನೆಗಳನ್ನ ನಿರಂತರವಾಗಿ ಮಾಡುತ್ತಾ ಮಹತ್ತರವಾದದ್ದನ್ನ ಸಾಧಿಸಬೇಕು. ಇವತ್ತು ವಿದ್ಯಾರ್ಥಿಗಳಿಗೆ ಕಲಿಯಲು ಮತ್ತು ಸಾಧಿಸಲು ಅನೇಕ ಅವಕಾಶಗಳಿವೆ. ಇದರ ಸದ್ಬಳಕೆಯನ್ನ ಮಾಡುವುದು ಮಾತ್ರ ವಿದ್ಯಾರ್ಥಿಗಳ ಕೈಯಲ್ಲಿದೆ. ಸಂದರ್ಭಗಳಿಗೆ ಯೋಗ್ಯವಾಗುವ ಧರಿಸು, ಉತ್ತಮ ಶಾರೀರಿಕ- ಮಾನಸಿಕ ಆರೋಗ್ಯ, ಉತ್ತಮ ಮಾತುಗಳು,ವಿದ್ಯೆ ಮತ್ತು ವಿನಯ ಎಂಬ 5 ಗುಣಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಯುವಜನರು ರಾಷ್ಟ ನಿರ್ಮಾಣದ ಗುರುತರವಾದ ಜವಾಬ್ದಾರಿಯನ್ನು ಹೊತ್ತುಕೊಂಡು ಮುನ್ನಡೆಯಬೇಕು. ಆಗಲೇ ಭಾರತ ವಿಶ್ವಗುರುವಾಗಲು ಸಾಧ್ಯ” ಎಂದು ತಿಳಿಸಿದರು.

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಲಕ್ಷ್ಮೀನಾರಾಯಣ ರಾವ್ ಅತೂರು ಇವರು ಸಮಾರಂಭದ ಅಧ್ಯಕ್ಷತೆಯನ್ನ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಧಾಕೃಷ್ಣ ಕೆ ಎಸ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ ಇವರು ಸರ್ವರನ್ನು ಸ್ವಾಗತಿಸಿದರು. ಪ್ರೌಢಶಾಲಾ ಹಿರಿಯ ಅಧ್ಯಾಪಕ ಪ್ರವೀಣ್ ಕುಮಾರ್ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here